ವಡಗೇರಾ: ‘ಕೇಂದ್ರದಲ್ಲಿ ನರೆಂದ್ರ ಮೋದಿ ನೇತೃತ್ವವದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ಸಾಧನೆಗಳನ್ನು ಕಂಡು ಮತದಾರರು ಮೂರು ರಾಜ್ಯಗಳಲ್ಲಿ ಆಶೀರ್ವದಿಸಿದ್ದಾರೆ’ ಎಂದು ಬಿಜೆಪಿ ಹಿರಿಯ ಮುಖಂಡ ಸಿದ್ದಣ್ಣಗೌಡ ಕಾಡಂನೋರ ಹೇಳಿದರು.

ಪಟ್ಟಣದಲ್ಲಿ ಬಿಜೆಪಿ ಗ್ರಾಮೀಣ ಮಂಡಲದ ವತಿಯಿಂದ ಸೋಮವಾರ ಆಯೋಜಿಸಿದ್ದ ವಿಜಯ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕಳೆದ ಹಲವಾರು ವರ್ಷಗಳಿಂದ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಸರ್ಕಾರ ದಿನ ದಲಿತರಿಗಾಗಿ, ಹಿಂದುಳಿದ ವರ್ಗದವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಭಾರತೀಯ ಜನತಾ ಪಕ್ಷದ ಮೂರು ರಾಜ್ಯಗಳಲ್ಲಿ ಅಭೂತಪೂರ್ವ ಗೆಲುವಿಗೆ ಈ ಯೋಜನೆಗಳೆ ಸಾಕ್ಷಿಯಾಗಿವೆ’ ಎಂದು ತಿಳಿಸಿದರು.

‘ಮುಂಬರುವ ಜಿ.ಪಂ, ತಾ.ಪಂ ಹಾಗೂ ಗ್ರಾ.ಪಂ ಚುನಾವಣೆಗಳಿಗೆ ಕಾರ್ಯಕರ್ತರು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು. ಬಿಜೆಪಿ ಪಕ್ಷದ ಸಿದ್ಧಾಂತ ಹಾಗೂ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ಮನವರಿಕೆ ಮಾಡಿಕೊಡಬೇಕು. ಹಾಗೆಯೇ ಪಕ್ಷದ ಕಾರ್ಯಕರ್ತರು ಸಂಘಟಿತರಾಗಿ ಪಕ್ಷದ ಗೆಲುವಿಗೆ ಶ್ರಮಿಸಬೇಕು’ ಎಂದು ಸಲಹೆ ನೀಡಿದರು.

ಇದಕ್ಕೂ ಮೊದಲು ಪಟ್ಟಣದ ವೃತ್ತದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಣೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ ಕಾಡಂನೋರ, ಬಸವರಾಜ ಸಾಹು, ಯಂಕಣ್ಣ ಬಸಂತಪೂರ, ಶಿವಕುಮಾರ ಕೊಂಕಲ್, ಹೊನ್ನಪ್ಪ ಕಡೇಚೂರ, ಗ್ರಾ.ಪಂ ಮಾಜಿ ಅಧ್ಯಕ್ಷ ಸಿದ್ದಪ್ಪ ತಮ್ಮಣ್ಣೋರ, ಮಹ್ಮದ್ ಖುರೇಸಿ, ರಾಚಯ್ಯಸ್ವಾಮಿ, ವಿಧ್ಯಾಧರ ನಾರಾಯಣಪೇಠ, ಮಾಹದೇವಪ್ಪ, ಶರಣು ರೇಷ್ಮಿ, ಸಂತೋಷ ಬೊಜ್ಜಿ, ಅಪ್ಪಣ್ಣ ಹಡಪದ, ಶರಣಯ್ಯಸ್ವಾಮಿ, ರಂಗು ಕೊಪ್ಪುರ, ಶಿವಪ್ಪ ಡುರ್ರೆ, ಶರಣು ಜಡಿ, ಯಲ್ಲಾಲಿಂಗ, ಸುರೇಶ ಕಂದಳ್ಳಿ, ಗಂಗಾಧರ ವಿಶ್ವಕರ್ಮ, ಮಲ್ಲು ಏರುಂಡಿ, ನಾಗಪ್ಪ ಬಸಂತಪೂರ ಸಾಬಯ್ಯ ಕಲಾಲ್, ಇಮಾಮ್ ಪಟೇಲ್ ಹಾಗೂ ಇನ್ನಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-30-79996329

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.