ಬೆಂಗಳೂರು: ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಆಗಿರುವ ಗೊಂದಲಗಳು ಕರ್ನಾಟಕದಲ್ಲಿ ಆಗದಂತೆ ಎಚ್ಚರಿಕೆ ವಹಿಸಲು ಜಾಗೃತಿ ಮೂಡಿಸುವ ಕೆಲಸವನ್ನು ಪಕ್ಷ ಮಾಡಲಿದೆ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಶ್ಚಿಮ ಬಂಗಾಳದಲ್ಲಿ ಆಗಿರುವ ಪರಿಸ್ಥಿತಿ, ರಾಜ್ಯದಲ್ಲಿ ಆಗದಂತೆ ಪಕ್ಷದ ವಕ್ತಾರರಿಗೆ, ಕಾರ್ಯಕರ್ತರಿಗೆಅರಿವು ಮೂಡಿಸುತ್ತೇವೆ. ಎಲ್ಲ ಕಡೆ ಸಭೆಗಳನ್ನು ಆಯೋಜಿಸಿ, ಯಾವ ರೀತಿ ಎಚ್ಚರಿಕೆ ವಹಿಸಬೇಕೆಂದು ತಿಳಿಸುತ್ತೇವೆ’ ಎಂದರು.

ಪ್ರಧಾನಿ ಕ್ಷಮೆ ಯಾಚಿಸಬೇಕು: ‘ನಿರಂತರ ಯುದ್ಧಗಳು ಮತ್ತು ಜಾಗತಿಕ ಅಸ್ಥಿರತೆಯು ಭಾರತವನ್ನು ಮತ್ತೆ ಬಡತನಕ್ಕೆ ತಳ್ಳಬಹುದೆಂದು ಪ್ರಧಾನಿ ನರೇಂದ್ರ ಮೋದಿ ಯಾವ ಅರ್ಥದಲ್ಲಿ ಹೇಳಿದ್ದಾರೆಂದು ಸ್ಪಷ್ಟನೆ ನೀಡಬೇಕು ಹಾಗೂ ಈ ದೇಶದ ಜನರ ಕ್ಷಮೆ ಯಾಚಿಸಬೇಕು’ ಎಂದು ಸುರೇಶ್ ಆಗ್ರಹಿಸಿದರು.

‘ಮೋದಿಯವರು ದೇಶದ ಚುಕ್ಕಾಣಿ ಹಿಡಿದು 12 ವರ್ಷವಾಗಿದೆ. ಈ ಹಿಂದಿನ ಆಡಳಿತಕ್ಕೆ ಹೋಲಿಸಿದಾಗ, ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಬೆಲೆ ಏರಿಕೆಯಿಂದ ಇಲ್ಲಿಯವರೆಗೆ ಹೆಚ್ಚುವರಿಯಾಗಿ ಸುಮಾರು ₹45 ಲಕ್ಷ ಕೋಟಿ ಸಂಗ್ರಹವಾಗಿದೆ’ ಎಂದರು.

‘ರಾಹುಲ್ ಗಾಂಧಿ ವಿದೇಶದಲ್ಲಿ ಮಾತನಾಡಿದಾಗ ದೇಶದ್ರೋಹಿ ಎನ್ನುತ್ತಾರೆ. ಸ್ವತಃ ಪ್ರಧಾನಿಯವರೇ ವಿದೇಶಿ ನೆಲದಲ್ಲಿ ನಿಂತು ಬಡತನ ಎದುರಾಗಿದೆ ಎಂದು ಮಾತನಾಡಿದ್ದಾರೆ ಎಂದಾಗ, ಯಾವ ದೃಷ್ಟಿಕೋನದಲ್ಲಿ ಅವರು ಹೇಳಿದ್ದಾರೆಂದು ಸ್ಪಷ್ಟನೆ ನೀಡಬೇಕು’ ಎಂದರು.

‘ಒಂದು ದೇಶ ಒಂದು ಚುನಾವಣೆ’ ಜಾರಿಗೆ ಪಕ್ಷ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, ‘ವಿವಿಧ ರಾಜ್ಯಗಳಲ್ಲಿ ವಿವಿಧ ಸಮಯಕ್ಕೆ ಚುನಾವಣೆಗಳು ನಡೆಯುತ್ತವೆ. ಒಂದು ದೇಶ ಒಂದು ಚುನಾವಣೆ ಎಂದು ಹೇಳುವುದು ಸುಲಭ. ಆದರೆ, ಪ್ರಜಾಪ್ರಭುತ್ವದಲ್ಲಿ ಆಯ್ಕೆಯಾದ ಸರ್ಕಾರಗಳು ಏನು ಮಾಡಬೇಕು ಎನ್ನುವುದಕ್ಕೆ ಸ್ಪಷ್ಟೀಕರಣ ಕೊಟ್ಟರೆ, ಇದು ಒಂದು ಹಂತಕ್ಕೆ ಬರುತ್ತದೆ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-4-1332067947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.