ಮಹಾಲಿಂಗಪುರ: ‘ದೇಶದಲ್ಲಿ ಸರಿಯಾದ ರೀತಿಯಲ್ಲಿ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಜಾರಿಯಾದರೆ, ನಾವೆಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಅಡಿಯಲ್ಲಿ ಒಂದು ಸುಭದ್ರ ಸರ್ಕಾರವನ್ನು ತರಲು ಸಾಧ್ಯವಾಗುತ್ತದೆ’ ಎಂದು ಬಾಗಲಕೋಟೆಯ ಸಾಮಾಜಿಕ ಕಾರ್ಯಕರ್ತೆ ಪವಿತ್ರಾ ಜಕ್ಕಪ್ಪನವರ ಹೇಳಿದರು.

ಪಟ್ಟಣದ ಶರಣ ಆಸ್ಪತ್ರೆ ಆವರಣದಲ್ಲಿ ಆಮ್ ಆದ್ಮಿ ಪಕ್ಷದಿಂದ ಮಂಗಳವಾರ ಹಮ್ಮಿಕೊಂಡಿದ್ದ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತ ಒಂದು ದಿನದ ಕಾರ್ಯಾಗಾರದಲ್ಲಿ ತರಬೇತಿ ನೀಡಿ ಮಾತನಾಡಿದರು.

‘ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯು ಪ್ರತಿಯೊಬ್ಬ ಅರ್ಹ ನಾಗರಿಕನನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ಜವಾಬ್ದಾರಿಯಾಗಿದೆ. ಸಾರ್ವಜನಿಕರು ಬೇರೆ ಊರುಗಳಿಗೆ ಉದ್ಯೋಗಕ್ಕಾಗಿ ಅಥವಾ ಇತರ ಕಾರಣಗಳಿಗಾಗಿ ವಲಸೆ ಹೋದಾಗ ಅವರ ದಾಖಲೆಗಳಲ್ಲಿ ವ್ಯತ್ಯಾಸಗಳಿದ್ದರೆ, ಒಟ್ಟಾಗಿ ಅದನ್ನು ಸರಿಪಡಿಸುವ ವ್ಯವಸ್ಥೆ ಆಗಬೇಕು’ ಎಂದರು.

ಪಕ್ಷದ ಉತ್ತರ ಕರ್ನಾಟಕ ಸಂಘಟನೆ ಕಾರ್ಯದರ್ಶಿ ಅರ್ಜುನ ಹಲಗಿಗೌಡರ ಮಾತನಾಡಿ, ‘ಪಟ್ಟಿಯಿಂದ ಯಾರ ಹೆಸರನ್ನು ಕೈಬಿಡಬೇಕು ಮತ್ತು ಯಾರ ಹೆಸರನ್ನು ಸೇರಿಸಬೇಕು ಎಂಬುದನ್ನು ನಿರ್ಧರಿಸಲು ಗ್ರಾಮಸಭೆ ನಡೆಸಬೇಕು. ಪಿಡಿಒ, ಬಿಎಲ್ಒ, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಜಂಟಿಯಾಗಿ ಪರಿಶೀಲನೆ ನಡೆಸಬೇಕು’ ಎಂದರು.

ಸಂವಿಧಾನದಡಿ ಎಸ್ಐಆರ್ ಮ್ಯಾಪಿಂಗ್ ಕುರಿತು ಮುಧೋಳದ ವಕೀಲ ಐ.ಎಚ್.ಅಂಬಿ ವಿವರಿಸಿದರು. ಬೆಂಗಳೂರಿನ ಬಸವರಾಜ ಮುರಗೋಡ, ರಾಯಚೂರಿನ ಲಕ್ಷ್ಮಣ ಮಂಡಲಗೇರಿ ತರಬೇತಿ ನೀಡಿದರು. ಸೈಯದ ಹಳಿಂಗಳಿ, ಹ್ಯಾಪಿಜ್ ಮೈಬೂಬ, ನಬಿಸಾಬ ಯಕ್ಸಂಬಿ, ಮೈಬೂಬ ಮಕಾನದಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-19-786836990

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.