ಸೂರಿ/ಗಲಸಿ (ಪಿಟಿಐ): ‘ನನ್ನನ್ನು ಸೋಲಿಸಲು 19 ರಾಜ್ಯ ಹಾಗೂ ಕೇಂದ್ರ ಒಂದಾಗಿವೆ. ಆದರೂ ಜನರಿಗಾಗಿ ನಾನು ಏಕಾಂಗಿಯಾಗಿ ಹೋರಾಡುತ್ತಿರುವೆ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಇಲ್ಲಿ ಹೇಳಿದರು.

ಬೀರ್ಭೂಮ್ ಜಿಲ್ಲೆಯ ಸೂರಿಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ದೆಹಲಿಯ ಪಡೆಗಳನ್ನು ಬಳಸಿಕೊಂಡು ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಗೆಲ್ಲುವುದು ಬಿಜೆಪಿಗೆ ಸಾಧ್ಯವಿಲ್ಲ’ ಎಂದರು.

‘ಪ್ರಧಾನಿ ನರೇಂದ್ರ ಮೋದಿಯವರ ‘ಮನದ ಮಾತು’ ಕಾರ್ಯಕ್ರಮವನ್ನು ಯುವ ಸಮೂಹದ ಮನಸ್ಸುಗಳ ಮೇಲೆ ಪ್ರಭಾವ ಬೀರಲಿಕ್ಕಾಗಿಯೇ ಪ್ರಸಾರ ಮಾಡಲಾಗುತ್ತಿದೆ’ ಎಂದು ದೂರಿದರು.

‘ಬಿಜೆಪಿ ಹಣ ಹಂಚುತ್ತಿದೆ. ನಮ್ಮಲ್ಲಿದ್ದ ಅಧಿಕಾರಿಗಳು, ಪೊಲೀಸರನ್ನು ಇತರ ರಾಜ್ಯಗಳಿಗೆ ವರ್ಗಾವಣೆ ಮಾಡಿರುವುದರಿಂದ, ಇಲ್ಲಿಗೆ ಬಂದಿರುವ ಯಾರೂ ಸಹ ಅವರನ್ನು ಹಿಡಿಯಲು ಸಾಧ್ಯವಿಲ್ಲದಾಗಿದೆ. ಹಣ, ಡ್ರಗ್ಸ್, ಶಸ್ತ್ರಾಸ್ತ್ರ ಸೇರಿದಂತೆ ಮತದಾರರನ್ನು ಪಶ್ಚಿಮ ಬಂಗಾಳಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿದೆ. ಬಿಹಾರದಿಂದ ಮತದಾರರನ್ನು ರೈಲು, ಬಸ್ಗಳಲ್ಲಿ ಕರೆತರಲಾಗುತ್ತಿದೆ’ ಎಂದು ಮಮತಾ ದೂರಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-51-1402863724

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.