ಕೋಲ್ಕತ್ತ (ಪಿಟಿಐ): ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಲು ಟಿಎಂಸಿಯಿಂದ ಉಚ್ಚಾಟಿತರಾಗಿರುವ ಹುಮಾಯೂನ್ ಕಬೀರ್ ಪಿತೂರಿ ನಡೆಸಿದ್ದಾರೆ ಎನ್ನಲಾಗಿರುವ ವಿಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದೀಗ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದಕ್ಕೂ ಕಾರಣವಾಗಿದೆ.

ಇದಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಪಕ್ಷವು ಗುರುವಾರ ಪತ್ರಿಕಾಗೋಷ್ಠಿ ನಡೆಸಿದ್ದು, ವಿಡಿಯೊವನ್ನು ಮಾಧ್ಯಮಗಳ ಮುಂದೆ ಹಂಚಿಕೊಂಡಿದೆ. ಅಲ್ಲದೇ, ಈ ಕುರಿತಂತೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಬೇಕು ಎಂದೂ ಆಗ್ರಹಿಸಿದೆ.

‘ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಲು ನಾನು ಯಾವ ಹಂತಕ್ಕೆ ಬೇಕಿದ್ದರೂ ಹೋಗುತ್ತೇನೆ. ಸುವೇಂದು ಅಧಿಕಾರಿ ಸೇರಿದಂತೆ ಬಿಜೆಪಿಯ ಹಲವು ಹಿರಿಯ ನಾಯಕರ ಜತೆಗೆ ಸಂಪರ್ಕದಲ್ಲಿದ್ದೇನೆ. ಪ್ರಧಾನಿ ಕಚೇರಿ ಜತೆಗೂ ಮಾತನಾಡಿದ್ದೇನೆ. ಬಿಜೆಪಿ ಆಡಳಿತದ ಇತರೆ ರಾಜ್ಯಗಳ ನಾಯಕರ ಜತೆಗೆ ಸಮನ್ವಯ ಸಾಧಿಸುವಂತೆ ಪಿಎಂಒ ಸಲಹೆ ನೀಡಿದೆ’ ಎಂದು ಕಬೀರ್ ವಿಡಿಯೊದಲ್ಲಿ ಹೇಳಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.

‘ಬಾಬರಿ ಮಸೀದಿ ವಿಚಾರವನ್ನು ಮುಂದಿಟ್ಟು ಟಿಎಂಸಿಯ ಮುಸ್ಲಿಂ ಮತಗಳನ್ನು ಬೇರೆಡೆಗೆ ತಿರುಗಿಸಿದರೆ ಅದರಿಂದ ಬಿಜೆಪಿಗೆ ಲಾಭವಾಗುತ್ತದೆ. ಈ ನಿಟ್ಟಿನಲ್ಲಿ ನಾನು ಕಾರ್ಯತಂತ್ರ ರೂಪಿಸುತ್ತಿದ್ದೇನೆ. ಎಲ್ಲಾ ಕ್ಷೇತ್ರಗಳಲ್ಲಿ ಈ ಕಾರ್ಯತಂತ್ರ ಜಾರಿಗೊಳಿಸಲು ನೂರಾರು ಕೋಟಿ ಹಣ ಬೇಕಾಗಬಹುದು’ ಎಂದೂ ಕಬೀರ್ ಹೇಳಿದ್ದಾರೆ ಎನ್ನಲಾಗಿದೆ.

ಟಿಎಂಸಿ ಹಿರಿಯ ನಾಯಕರಾದ ಫರ್ಹಾದ್ ಹಕೀಂ ಹಾಗೂ ಅರೂಪ್ ಬಿಸ್ವಾಸ್ ಅವರು ಈ ಬಗ್ಗೆ ಮಾತನಾಡಿ, ‘ರಾಜ್ಯದ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವಬೀರಲು ರೂಪಿಸಿರುವ ಸಂಚನ್ನು ಈ ವಿಡಿಯೊ ಬಹಿರಂಗ ಪಡಿಸಿದೆ ಈ ಬಗ್ಗೆ ತನಿಖೆ ನಡೆಸಲೇಬೇಕು’ ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-51-1590875558

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.