ಕೋಲ್ಕತ್ತ (ಪಿಟಿಐ): ಚುನಾವಣಾ ಕಾರ್ಯಗಳಿಂದ ಅಧಿಕ ಒತ್ತಡ ಉಂಟಾಗುತ್ತಿರುವ ಬಗ್ಗೆ ಪಶ್ಚಿಮ ಬಂಗಾಳದ ವಿಶ್ವಭಾರತಿ ವಿಶ್ವವಿದ್ಯಾಲಯದ ಅಧ್ಯಾಪಕರು ಸಂಸ್ಥೆಯ ಕುಲಪತಿಗೆ ಪತ್ರ ಬರೆದಿದ್ದಾರೆ. ಚುನಾವಣಾ ಆಯೋಗ ತಕ್ಷಣ ಮಧ್ಯ ಪ್ರವೇಶಿಸುವಂತೆ ಒತ್ತಾಯಿಸಿದ್ದಾರೆ.

ಚುನಾವಣಾ ಕಾರ್ಯಕ್ಕೆ ನಿರಂತರ ವಾಗಿ ನಿಯೋಜನೆ ಮಾಡುತ್ತಿರುವುದ ರಿಂದ ಮಾನಸಿಕ ಮತ್ತು ದೈಹಿಕ ಒತ್ತಡ ಉಂಟಾಗುತ್ತಿದೆ ಎಂದು ಹಲವು ಅಧ್ಯಾಪಕರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ತುರ್ತಾಗಿ ನೀವು ಈ ಬಗ್ಗೆ ಗಮನಹರಿಸಬೇಕು. ಹಲವರನ್ನು 24 ಪರಗಣ ಜಿಲ್ಲೆಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಏಪ್ರಿಲ್ 28 ಮುಂಜಾನೆ ಕರ್ತವ್ಯಕ್ಕೆ ಹಾಜರಾಗಲು ಸೂಚಿಸಲಾಗಿದೆ. ಅದರ ಹಿಂದಿನ ದಿನವಷ್ಟೇ ಬೀರ್ಭೂಮ್ ಜಿಲ್ಲೆಯಲ್ಲಿ ಕರ್ತವ್ಯ ಪೂರ್ಣಗೊಳ್ಳುತ್ತದೆ. ಕೆಲವರು ಸಾಗರದ ದ್ವೀಪ ದವರೆಗೆ ಪ್ರಯಾಣಿಸ ಬೇಕಾಗುತ್ತದೆ. ಕಡಿಮೆ ಅವಧಿಯಲ್ಲಿ ಅಷ್ಟು ದೂರ ಪ್ರಯಾಣಿಸುವುದು ಕಷ್ಟಕರವಾಗುತ್ತದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

‘ಪತ್ರ ನಮಗೆ ತಲುಪಿದೆ. ಆದರೆ ಈ ಪರಿಸ್ಥಿತಿಯಲ್ಲಿ ಚುನಾವಣಾ ವೇಳಾ ಪಟ್ಟಿಯಲ್ಲಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ನಾವು ಎಲ್ಲರ ಸಹಕಾರ ಬಯಸುತ್ತೇವೆ. ಆಯೋಗವು ವಸತಿ, ಪ್ರಯಾಣ ವ್ಯವಸ್ಥೆಯನ್ನು ಮಾಡುತ್ತದೆ ಮತ್ತು ಸುರಕ್ಷತೆ ಬಗ್ಗೆ ಗಮನಹರಿಸುತ್ತದೆ’ ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-51-641754770

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.