ಮುಂಡರಗಿ: ‘ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ತಿರಸ್ಕರಿಸುವ ಮೂಲಕ ಕಾಂಗ್ರೆಸ್ ಸೇರಿದಂತೆ ಇಂಡಿ ಮೈತ್ರಿಕೂಟದ ಪಕ್ಷಗಳು ದೇಶದ ಮಹಿಳೆಯರಿಗೆ ಅವಮಾನ ಮಾಡಿವೆ. ಸದ್ಯ ಜರುಗಲಿರುವ ಪಂಚರಾಜ್ಯಗಳ ಚುನಾವಣೆಯಲ್ಲಿ ದೇಶದ ಮಹಿಳಾ ಮತದಾರರು ವಿರೋಧ ಪಕ್ಷಗಳಿಗೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಬಿಜೆಪಿ ಮುಂಡರಗಿ ಮಂಡಲದ ನೂತನ ಅಧ್ಯಕ್ಷ ಕುಮಾರಸ್ವಾಮಿ ಹಿರೇಮಠ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಹಮ್ಮಿಕೊಂಡಿದ್ದ ಬಿಜೆಪಿ ನೂತನ ಅಧ್ಯಕ್ಷರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಅಮೆರಿಕಾ, ಇರಾನ್ ಹಾಗೂ ಇಸ್ರೇಲ್ ಯುದ್ಧದ ಕಾರಣದಿಂದ ಜಗತ್ತಿನ ಬಹುತೇಕ ದೇಶಗಳು ಇಂಧನ ಸಮಸ್ಯೆ ಎದುರಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶದಲ್ಲಿ ಇಂಧನ ಕೊರತೆಯಾಗದಂತೆ ಕ್ರಮ ಕೈಗೊಂಡಿದ್ದಾರೆ’ ಎಂದು ತಿಳಿಸಿದರು.

ಬಿಜೆಪಿ ಹಿರಿಯ ಮುಖಂಡ ಕೆ.ವಿ.ಹಂಚಿನಾಳ ಮಾತನಾಡಿ, ‘ತಾಲ್ಲೂಕಿನಲ್ಲಿ ಸಾಕಷ್ಟು ಜನರು ಬಿಜೆಪಿಯ ಪ್ರಾಮಾಣಿಕ ಕಾರ್ಯಕರ್ತರಾಗಿದ್ದು, ನೂತನ ಅಧ್ಯಕ್ಷರು ಎಲ್ಲರನ್ನು ವಿಶ್ವಾಸಕ್ಕೆ ತಗೆದುಕೊಂಡು ಪಕ್ಷದ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.

ಪುರಸಭೆ ಮಾಜಿ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಮಾತನಾಡಿ, ‘ಪಂಚರಾಜ್ಯಗಳ ಚುನಾವಣೆಯಲ್ಲಿ ಸೋಲಿನ ಭಯದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆಯುವ ಮೂಲಕ ದೇಶದ ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ತಕ್ಷಣ ಅವರು ದೇಶದ ಜನತೆಯ ಕ್ಷಮೆ ಕೇಳಬೇಕು’ ಎಂದು ಒತ್ತಾಯಿಸಿದರು.

ಕಾರ್ಯದರ್ಶಿ ಪ್ರಶಾಂತ ಗುಡದಪ್ಪನವರ, ಕಾರ್ಯದರ್ಶಿ ಬಸವರಾಜ ಬಿಳಿಮಗ್ಗದ, ಮುಖಂಡರಾದ ಕೊಟ್ರೇಶ ಅಂಗಡಿ, ಶಿವಪ್ಪ ಚಿಕ್ಕಣ್ಣವರ, ಮೈಲಾರೆಪ್ಪ ಕಲಕೇರಿ, ಪವನ ಮೇಟಿ, ಮಂಜುನಾಥ ಮುಧೋಳ, ರವಿಗೌಡ ಪಾಟೀಲ, ದೇವು ಹಡಪದ, ಚಿನ್ನಪ್ಪ ವಡ್ಡಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-23-1862035011

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.