ಯಾದಗಿರಿ: ಪಂಚರಾಜ್ಯಗಳ ವಿಧಾನ ಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸೋಮವಾರ ಸಂಭ್ರಮಿಸಿದರು.

ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡು ಪಕ್ಷದ ಬಾವುಟ ಹಿಡಿದು ವಿಜಯೋತ್ಸವ ಆಚರಿಸಿ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ನಿತಿನ್ ನಬೀನ್ ಅವರಿಗೆ ಜೈಕಾರ ಕೂಗಿದರು. ಪರಸ್ಪರ ಸಿಹಿ ತಿನಿಸಿದರು.

ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ಮಹೇಶರೆಡ್ಡಿ ಮುದ್ನಾಳ ಮಾತನಾಡಿ, ‘ಮುಂದಿನ 30 ರಿಂದ 40 ವರ್ಷ ಅಧಿಕಾರಿದಲ್ಲಿ ನಾವೇ ಇರುತ್ತೇವೆ ಎಂಬ ಅಹಂನಲ್ಲಿದ್ದ ಪಶ್ಚಿಮ ಬಂಗಾಳದ ಸಿಎಂ, ಶಾಸಕರಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಸತತವಾಗಿ ಮೂರು ಬಾರಿ ಅಧಿಕಾರದಲ್ಲಿ ಇದ್ದಿದ್ದರಿಂದ ಅಧಿಕಾರದ ಮದ ಏರಿತ್ತು. ಈ ಚುನಾವಣೆಯಲ್ಲಿ ಆ ಮದ ಇಳಿದಿದೆ’ ಎಂದರು.

‘ಬಿಜೆಪಿ ಅಭ್ಯರ್ಥಿಗಳಿಗೆ ಮತ ಹಾಕಿದವರಿಗೆ ಬೆದರಿಕೆ ಹಾಕಿ, ಹಲ್ಲೆ ನಡೆಸಿದ ಘಟನೆಗಳು ನಡೆದಿದ್ದವು. ಸಿಎಂ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳವನ್ನು ಮತ್ತೊಂದು ಬಾಂಗ್ಲಾ ದೇಶ ಮಾಡಲು ಹೊರಟಿದ್ದರು. ಮತದಾರರು ಟಿಎಂಸಿಯನ್ನು ಕಿತ್ತು ಹೊಗೆದಿದ್ದಾರೆ’ ಎಂದರು.

‘ತಮಿಳುನಾಡು, ಕೇರಳಂ ರಾಜ್ಯಗಳಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರದೆ ಇದ್ದರೂ ಚುನಾವಣೆಯಲ್ಲಿ ಉತ್ತಮವಾದ ಪ್ರದರ್ಶನ ನೀಡಿದೆ. ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಆ ರಾಜ್ಯಗಳಲ್ಲಿ ಬಿಜೆಪಿಗೆ ಒಳ್ಳೆಯ ಅವಕಾಶ ಇದೆ ಎಂಬುದನ್ನು ತೋರಿಸಿದ್ದಾರೆ. ಐದು ರಾಜ್ಯಗಳ ಚುನಾವಣೆಯು 2028ರ ಚುನಾವಣೆಗೆ ದಿಕ್ಸೂಚಿಯಾಗಿದೆ’ ಎಂದು ಹೇಳಿದರು.

ಮುಖಂಡರಾದ ನಾಗರತ್ನ ಕುಪ್ಪಿ ಮಾತನಾಡಿ, ‘ಪಶ್ಚಿಮ ಬಂಗಾಳದ ಬಿಜೆಪಿ ವಿಜಯೋತ್ಸವ ಇಡೀ ದೇಶದ ವಿಜಯೋತ್ಸವವಾಗಿದೆ. ಈ ಹಿಂದಿನ 3ನೇ ಚುನಾವಣೆಯಲ್ಲಿ ಬೆರಳೆಣಿಕೆಯಷ್ಟು ಕ್ಷೇತ್ರಗಳನ್ನು ಗೆದ್ದುಕೊಂಡಿದ್ದ ಬಿಜೆಪಿ ಈಗ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿಯಲಿದೆ’ ಎಂದರು.

‘ಮಹಿಳೆಯರಿಗೆ ರಕ್ಷಣೆ ನೀಡುತ್ತಾರೆ ಎಂದು ನಂಬಿ ಬಂಗಾಳದ ಮತದಾರರು ಮಮತಾ ಬ್ಯಾನರ್ಜಿ ಅವರಿಗೆ ಮತ ನೀಡಿದ್ದರು. ಆದರೆ, ಆ ಕೆಲಸವನ್ನು ಮಾಡಲಿಲ್ಲ. ಅತ್ಯಾಚಾರದಂತಹ ಅತಿ ಹೆಚ್ಚು ಪ್ರಕರಣಗಳು ಆ ರಾಜ್ಯದಲ್ಲಿ ನಡೆದವು. ಪ್ರಧಾನಿ ಮೋದಿ ಅವರು ಮಹಿಳೆಯರಿಗೆ ರಕ್ಷಣೆಯ ಭರವಸೆ ನೀಡಿದ್ದರು. ಎಸ್ಐಆರ್ ಜಾರಿಗೆ ತಂದು ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರ ಹಾಕಿದರು’ ಎಂದು ಹೇಳಿದರು.

ವಿಜಯೋತ್ಸವದಲ್ಲಿ ಮುಖಂ ಡರಾದ ದೇವಿಂದ್ರನಾಥ ನಾದ, ಪರುಶುರಾಮ ಕುರುಕುಂದಿ, ವೆಂಕಟರೆಡ್ಡಿ ಅಬ್ಬೆತುಮಕೂರು, ಲಿಂಗಪ್ಪ ಹತ್ತಿಮನಿ, ವಿಲಾಸ್ ಪಾಟೀಲ, ರುದ್ರುಗೌಡ ಪಾಟೀಲ, ಶರಣರೆಡ್ಡಿ ಕೊಡ್ಲ, ಶ್ರೀದೇವಿ ಶೆಟ್ಟಿಹಳ್ಳಿ, ರಮಾದೇವಿ ಕಾವಲಿ, ಸ್ವಾಮಿದೇವ ದಾಸನಕೇರಿ, ರಮೇಶ್ ದೊಡಮನಿ, ರಾಜುಸ್ವಾಮಿ ಅನಂಪಲಿ, ಅಪ್ಪಣ್ಣ ಜೈನ್, ಮಂಜುನಾಥ ಜಡಿ, ಗೋವಿಂದಪ್ಪ ಖಾನಾಪುರ, ಚನ್ನವಿರಯ್ಯ ಸ್ವಾಮಿ, ಲಕ್ಷ್ಮಿಪುತ್ರ ಮಾಲಿಪಾಟೀಲ, ಮೌನೇಶ ಬೇಳಿಗೇರ, ದೇವಿಂದ್ರಪ್ಪ ಯರಗೊಳ ಸೇರಿದಂತೆ ಹಲವಾರು ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-30-2005896254

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.