ಯಾದಗಿರಿ: ದೇಶದ ನಾರಿಶಕ್ತಿಯನ್ನು ರಾಜಕೀಯ ಪ್ರಾತಿನಿಧ್ಯ ನೀಡಿ ಸಬಲರನ್ನಾಗಿಸುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಂಡಿಸಿದ ನಾರಿಶಕ್ತಿ ವಂದನ ಅಧಿನಿಯಮಕ್ಕೆ ವಿರೋಧ ವ್ಯಕ್ತಪಡಿಸುವ ಮೂಲಕ ಸೋಲಾಗುವಂತೆ ಮಾಡಿದ ಕಾಂಗ್ರೆಸ್ ಪಕ್ಷ ತಾನು ದೇಶದ ಮಹಿಳೆಯರ ಹಾಗೂ ಜನಸಾಮಾನ್ಯರ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ ಎಂದು ಬಿಜೆಪಿ ಮುಖಂಡ ರಾಚನಗೌಡ ಮುದ್ನಾಳ ಟೀಕಿಸಿದ್ದಾರೆ.

ಮಹಿಳಾ ವಿರೋಧಿ ಧೋರಣೆ ತಳೆದಿರುವ ಕಾಂಗ್ರೆಸ್ಗೆ ದೇಶದ ಮಹಿಳೆಯರು ಮುಂಬರುವ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸುವರು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ನಾರಿ ಶಕ್ತಿ ವಂದನಾ ಅಧಿನಿಯಮದ ಮೂಲಕ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿತ್ತು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಅದನ್ನು ತಡೆಯಲು ಹರಸಾಹಸ ಮಾಡಿದವು. ಈ ಮೂಲಕ ಕಾಂಗ್ರೆಸ್ ತನ್ನ ದ್ವಂದ್ವ ನೀತಿಯನ್ನು ಪ್ರದರ್ಶಿಸಿದೆ. ದಶಕಗಳ ಕಾಲ ಅಧಿಕಾರದಲ್ಲಿದ್ದರೂ ಮಹಿಳೆಯರಿಗೆ ರಾಜಕೀಯ ಹಕ್ಕು ನೀಡದೆ, ಕೇವಲ ಮತಬ್ಯಾಂಕ್ ರಾಜಕಾರಣ ಮಾಡುತ್ತಾ ದೇಶದ ಜನರನ್ನು ಹಾದಿ ತಪ್ಪಿಸುತ್ತಾ ಬಂದಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಕೇವಲ ಒಂದು ಕುಟುಂಬದ ಏಳಿಗೆಗೆ ಸೀಮಿತವಾಗಿದೆ. ಸಾಮಾನ್ಯ ಕುಟುಂಬದ ಹೆಣ್ಣುಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರುವುದನ್ನು ಸಹಿಸುತ್ತಿಲ್ಲ. ಆದರೆ, ಬಿಜೆಪಿ ಸಾಮಾನ್ಯ ಮಹಿಳೆಗೂ ರಾಷ್ಟ್ರಪತಿ ಹುದ್ದೆಯಂತಹ ಅತ್ಯುನ್ನತ ಸ್ಥಾನ ನೀಡಿ ಗೌರವಿಸಿದೆ. ಈ ರಾಜಕೀಯ ಬೆಳವಣಿಗೆ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಚುನಾವಣೆಗಳ ಮೇಲೆ ಪರಿಣಾಮ ಬೀರಲಿದೆ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-30-2026995372

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.