ನವದೆಹಲಿ:ಗುರ್ಜರ್ ಮೀಸಲಾತಿ ಹೋರಾಟಗಾರ ಕಿರೋಡಿ ಸಿಂಹ ಬೈಸಲಾ ಅವರು ಬುಧವಾರ ಬಿಜೆಪಿ ಸೇರಿದ್ದಾರೆ. ರಾಜಸ್ಥಾನದ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿದ್ದ ಪಕ್ಷಕ್ಕೆ ಪ್ರಭಾವಿ ನಾಯಕ ಬೈಸಲಾ ಸೇರ್ಪಡೆಯಿಂದ ಹೊಸ ಚೈತನ್ಯ ಸಿಗುವ ನಿರೀಕ್ಷೆಯಿದೆ.

ಬೈಸಲಾ ಹಾಗೂ ಅವರ ಪುತ್ರ ವಿಜಯ್ ಬೈಸಲಾ ಅವರುಪಕ್ಷದ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸೇರ್ಪಡೆ ನಿರ್ಧಾರ ಪ್ರಕಟಿಸಿದರು. ರಾಜಸ್ಥಾನದ ಬಿಜೆಪಿ ಉಸ್ತುವಾರಿ ನಾಯಕ ಪ್ರಕಾಶ್ ಜಾವಡೇಕರ್ ಅವರು ಈ ವೇಳೆ ಉಪಸ್ಥಿತರಿದ್ದರು.

ಬೈಸಲಾ ಅಥವಾ ಅವರ ಪುತ್ರನಿಗೆ ಬಿಜೆಟಿ ಟಿಕೆಟ್ ನೀಡುವ ಸಾಧ್ಯತೆಯಿದೆ. 2009ರಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಬೈಸಲಾ, ಚುನಾವಣೆಯಲ್ಲಿ ಸೋತಿದ್ದರು. ಬಳಿಕ ಮೀಸಲಾತಿ ಹೋರಾಟ ಆರಂಭಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.