ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ 3ನೇ ಹಂತ: ಮಧ್ಯಾಹ್ನ 3ರವರೆಗೆ ಶೇ 50 ರಷ್ಟು ಮತದಾನ

Published 7 ಮೇ 2024, 11:00 IST
Last Updated 7 ಮೇ 2024, 11:00 IST
ಅಕ್ಷರ ಗಾತ್ರ

ನವದೆಹಲಿ: 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 93 ಲೋಕಸಭಾ ಕ್ಷೇತ್ರಗಳಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಹಾಗೂ ಕೆಲವು ರಾಜ್ಯಗಳ ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಿದ ವರದಿಗಳನ್ನು ಹೊರತು ಪಡಿಸಿದರೆ ಮತದಾನ ಬಹುತೇಕ ಶಾಂತಿಯುತವಾಗಿ ನಡೆಯುತ್ತಿದೆ. 

ದೇಶದಾದ್ಯಂತ ಮಧ್ಯಾಹ್ನ 3 ಗಂಟೆವರೆಗೂ ಶೇ 50ಕ್ಕಿಂತ ಹೆಚ್ಚು ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. 

ಮಧ್ಯಾಹ್ನ 3 ಗಂಟೆಯ ವೇಳೆಗೆ ಮಹಾರಾಷ್ಟ್ರದಲ್ಲಿ ಶೇ 42.63 ರಷ್ಟು ಕಡಿಮೆ ಮತದಾನವಾಗಿದೆ.  ಪಶ್ಚಿಮ ಬಂಗಾಳದಲ್ಲಿ ಶೇ 63.11 ರಷ್ಟು ಹೆಚ್ಚು ಮತದಾನವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT