ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LSpolls: ರಾಮನ ಪಾತ್ರಧಾರಿ, ನಟ ಅರುಣ್ ಗೋವಿಲ್ ನಾಮಪತ್ರ ಸಲ್ಲಿಕೆ

Published 2 ಏಪ್ರಿಲ್ 2024, 9:38 IST
Last Updated 2 ಏಪ್ರಿಲ್ 2024, 9:38 IST
ಅಕ್ಷರ ಗಾತ್ರ

ಮೀರತ್‌(ಉತ್ತರ ಪ್ರದೇಶ): ದೂರದರ್ಶನದ ರಾಮಾಯಣ ಧಾರಾವಾಹಿಯಲ್ಲಿ ರಾಮನ ಪಾತ್ರದ ಮೂಲಕ ಗಮನ ಸೆಳೆದಿದ್ದ ನಟ ಅರುಣ್ ಗೋವಿಲ್ ಅವರು, ಉತ್ತರ ಪ್ರದೇಶದ ಮೀರತ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಗೋವಿಲ್ ಜೊತೆಗಿದ್ದರು.

ನನ್ನ ಮೇಲೆ ನಂಬಿಕೆ ಇಟ್ಟ ಮತ್ತು ಮೀರತ್‌ನಿಂದ ನನ್ನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ಬಿಜೆಪಿ ವರಿಷ್ಠರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ನಾಮಪತ್ರ ಸಲ್ಲಿಕೆ ಬಳಿಕ ಹೇಳಿದರು.

ಜನರಿಂದ ಅದ್ಭುತ ಬೆಂಬಲ ಸಿಕ್ಕಿದೆ ಎಂದೂ ಅವರು ಹೇಳಿದ್ದಾರೆ.

‘ಅರುಣ್ ಗೋವಿಲ್ ಇಂದು ನಾಮಪತ್ರ ಸಲ್ಲಿಸಿದರು. ಉತ್ತರ ಪ್ರದೇಶದಲ್ಲಿ ಬಿಜೆಪಿ 80ಕ್ಕೆ 80 ಸ್ಥಾನ ಮತ್ತು ದೇಶದಲ್ಲಿ ಎನ್‌ಡಿಎ 400ಕ್ಕೂ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸದಲ್ಲಿ ಕಾರ್ಯಕರ್ತರಿದ್ದಾರೆ’ಎಂದು ಮೌರ್ಯ ಹೇಳಿದರು.

‘ಈ ಕ್ಷೇತ್ರದಲ್ಲಿ ನಮಗೆ ಎಸ್‌ಪಿ, ಬಿಎಸ್‌ಪಿ ಮತ್ತು ಕಾಂಗ್ರೆಸ್ ಸೇರಿದಂತೆ ಯಾವ ಪಕ್ಷದಿಂದಲೂ ಎದುರಾಳಿಗಳೇ ಇಲ್ಲ’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT