ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Election Result | ಗಾಂಧಿನಗರ: ಅಮಿತ್ ಶಾಗೆ 7 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು

Published 4 ಜೂನ್ 2024, 9:32 IST
Last Updated 4 ಜೂನ್ 2024, 12:25 IST
ಅಕ್ಷರ ಗಾತ್ರ

ಗಾಂಧಿನಗರ: ಲೋಕಸಭೆ ಚುನಾವಣೆ ಮತ ಎಣಿಕೆಯಲ್ಲಿ, ಗುಜರಾತ್‌ನ ಗಾಂಧಿನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮಿತ್ ಶಾ ಅವರು 7.44 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಕಳೆದ ಬಾರಿ ಅಮಿತ್ ಶಾ 5.57 ಲಕ್ಷ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.

ಈ ಬಾರಿ ಗೆಲುವಿನ ಅಂತರವನ್ನು ಅಮಿತ್ ಶಾ ಮತ್ತಷ್ಟು ಹೆಚ್ಚಿಸಿಕೊಂಡಿದ್ದಾರೆ. ಈ ಬಾರಿ 10,10,972 ಮತಗಳನ್ನು ಅಮಿತ್‌ ಶಾ ಪಡೆದುಕೊಂಡಿದ್ದಾರೆ. ಈ ಮೂಲಕ ಪ್ರತಿಸ್ಪರ್ಧಿಗಿಂತ 7,44,716 ಹೆಚ್ಚು ಮತ ಗಳಿಸಿದ್ದಾರೆ.

ಅಮಿತ್ ಶಾ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಸೋನಲ್ ಪಟೇಲ್ ಅವರಿಗೆ 2,66,256  ಲಕ್ಷ ಮತಗಳು ಲಭಿಸಿವೆ.

ಈ ಹಿಂದೆ ಗಾಂಧಿನಗರ ಲೋಕಸಭಾ ಕ್ಷೇತ್ರವನ್ನು ಬಿಜೆಪಿಯ ಎಲ್‌.ಕೆ. ಅಡ್ವಾಣಿ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪ್ರತಿನಿಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT