ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ನೀಡಿದರೂ ಸೋತಿದ್ದು ಅರ್ಥವಾಗುತ್ತಿಲ್ಲ: ಜಗನ್‌

Published 4 ಜೂನ್ 2024, 13:46 IST
Last Updated 4 ಜೂನ್ 2024, 13:46 IST
ಅಕ್ಷರ ಗಾತ್ರ

ಅಮರಾವತಿ(ಆಂಧ್ರ ಪ್ರದೇಶ): ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದರೂ ವಿಧಾನಸಭಾ ಚುನಾವಣೆಯಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಸೋಲಿಗೆ ಕಾರಣವನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸವಾಲುಗಳನ್ನು ಎದುರಿಸಲು ನಾನು ಸಿದ್ದನಿದ್ದೇನೆ. ಗೆದ್ದ ಪಕ್ಷಕ್ಕೆ ಶುಭಹಾರೈಸುತ್ತೇನೆ. ವೈಎಸ್ಆರ್ ಕಾಂಗ್ರೆಸ್ ಪಕ್ಷವು ಧ್ವನಿ ಇಲ್ಲದವರ ಧ್ವನಿಯಾಗಿ ಕಾರ್ಯನಿರ್ವಹಿಸಲಿದೆ’ ಎಂದು ಹೇಳಿದರು.

ಇದೇ ವೇಳೆ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು, ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಮತ್ತು ಬಿಜೆಪಿ ನಾಯಕರಿಗೆ ಅಭಿನಂದನೆ ಸಲ್ಲಿಸಿದರು.

ಈಗಿನ ಟ್ರೆಂಡ್ ಪ್ರಕಾರ ಟಿಡಿಪಿ 55 (81ರಲ್ಲಿ ಮುನ್ನಡೆ), ಜನಸೇನಾ 7 (14ರಲ್ಲಿ ಮುನ್ನಡೆ) ಮತ್ತು ಬಿಜೆಪಿ 4 (4ರಲ್ಲಿ ಮುನ್ನಡೆ) ವಿಧಾನಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ವೈಎಸ್ಆರ್ ಕಾಂಗ್ರೆಸ್ ಮೂರು ಸ್ಥಾನಗಳನ್ನು ಗೆದ್ದು ಏಳು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಪುಲಿವೆಂದುಲ ವಿಧಾನಸಭಾ ಕ್ಷೇತ್ರದಿಂದ 61 ಸಾವಿರ ಮತಗಳ ಅಂತರದಿಂದ ಜಗನ್ ಗೆಲುವು ಸಾಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT