ಅಮರಾವತಿ: ಆಂಧ್ರಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಇಂದಿನಿಂದ (ಗುರುವಾರ) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಬಗ್ಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

'ರಾಜ್ಯದ 25 ಲೋಕಸಭಾ ಮತ್ತು 175 ವಿಧಾನ ಸಭಾ ಸ್ಥಾನಗಳಿಗೆ ಮೇ 13 ರಂದು ಮತದಾನ ನಡೆಯಲಿದೆ. ಏಪ್ರಿಲ್ 18 ರಿಂದ ಏಪ್ರಿಲ್ 25 ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಏಪ್ರಿಲ್ 26 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 29 ಕೊನೆಯ ದಿನ' ಎಂದು ಮುಖ್ಯ ಚುನಾವಣಾಧಿಕಾರಿ ಮುಖೇಶ್ ಕುಮಾರ್ ಮೀನಾ ತಿಳಿಸಿದ್ದಾರೆ.

ಲೋಕಸಭಾ ಅಭ್ಯರ್ಥಿಗಳು ₹ 25,000 ಮತ್ತು ವಿಧಾನಸಭೆ ಅಭ್ಯರ್ಥಿಗಳು ₹ 10,000 ಠೇವಣಿ ಇಡಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.

ವೈಎಸ್‌ಆರ್‌ಸಿಪಿ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ(ಪುಲಿವೆಂದುಲಾ), ಟಿಡಿಪಿ ವರಿಷ್ಠ ಎನ್. ಚಂದ್ರಬಾಬು ನಾಯ್ಡು (ಕುಪ್ಪಂ), ಅವರ ಪುತ್ರ ನಾರಾ ಲೋಕೇಶ್ (ಮಂಗಳಗಿರಿ) ಹಾಗೂ ಜನಸೇನಾ ಸಂಸ್ಥಾಪಕ, ನಟ ಪವನ್ ಕಲ್ಯಾಣ್ (ಪಿಠಾಪುರಂ) ಅವರು ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಪ್ರಮುಖ ನಾಯಕರು.

ರಾಜ್ಯ ಬಿಜೆಪಿ ಮುಖ್ಯಸ್ಥೆ ಡಿ. ಪುರಂದೇಶ್ವರಿ (ರಾಜಮಂಡ್ರಿ), ಎಪಿಸಿಸಿ ಅಧ್ಯಕ್ಷೆ ಮತ್ತು ಜಗನ್ ಸಹೋದರಿ ವೈ.ಎಸ್ ಶರ್ಮಿಳಾ (ಕಡಪ) ಲೋಕಸಭೆ ಚುನಾವಣೆ ಕಣದಲ್ಲಿದ್ದಾರೆ.

ವೈಎಸ್‌ಆರ್‌ಸಿಪಿ ಏಕಾಂಗಿ ಹೋರಾಟ ನಡೆಸುತ್ತಿದ್ದರೆ, ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಎನ್‌ಡಿಎ ಭಾಗವಾಗಿವೆ. ರಾಜ್ಯದಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾದ ಸಿಪಿಐ ಮತ್ತು ಸಿಪಿಎಂ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಕಾಂಗ್ರೆಸ್ ಹೇಳಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ವೈಎಸ್‌ಆರ್‌ಸಿಪಿ 22 ಸ್ಥಾನಗಳನ್ನು ಗೆದ್ದಿದ್ದರೆ, ಟಿಡಿಪಿ 3 ಸ್ಥಾನಗಳನ್ನು ಪಡೆದುಕೊಂಡಿತ್ತು. ಅದೇ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ 151 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದರೆ, ಟಿಡಿಪಿ ಕೇವಲ 23 ಮತ್ತು ಜನಸೇನಾ ಒಂದು ಸ್ಥಾನವನ್ನು ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.
.ಲೋಕಸಭೆಗೊ, ವಿಧಾನಸಭೆಗೋ ಗೊಂದಲದಲ್ಲಿ ಪವನ್ ಕಲ್ಯಾಣ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.