ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Arunachal Election Results | ಬಹುಮತದತ್ತ ಬಿಜೆಪಿ;33 ಕ್ಷೇತ್ರಗಳಲ್ಲಿ ಮುನ್ನಡೆ

Published 2 ಜೂನ್ 2024, 4:59 IST
Last Updated 2 ಜೂನ್ 2024, 4:59 IST
ಅಕ್ಷರ ಗಾತ್ರ

ಇಟಾನಗರ: ಅರುಣಾಚಲ ಪ್ರದೇಶದ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬೆಳಿಗ್ಗೆ 10ರ ವರೆಗೆ ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಆಡಳಿತಾರೂಢ ಬಿಜೆಪಿ 33 ಕ್ಷೇತ್ರಗಳಲ್ಲಿ, ನ್ಯಾಶನಲ್ ಪೀಪಲ್ಸ್ ಪಾರ್ಟಿ(ಎನ್‌ಪಿಇಪಿ) 6 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಬೆಳಿಗ್ಗೆ 6 ಗಂಟೆಯಿಂದ 50 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದೆ. 60 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಲ್ಲಿ ಬಿಜೆಪಿ ಅವಿರೋಧವಾಗಿ ಆಯ್ಕೆಯಾಗಿದೆ.

ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯ ಮತದಾನ ಏಪ್ರಿಲ್‌ 19 ರಂದು ಏಕಕಾಲದಲ್ಲಿ ನಡೆದಿತ್ತು.

ಉಳಿದಂತೆ ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ ಮತ್ತು ಪೀ‍ಪಲ್ಸ್ ಪಾರ್ಟಿ ಆಫ್ ಅರುಣಾಚಲ(ಪಿಪಿಎ) 3 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿತ್ತು.

ರಾಜ್ಯದಾದ್ಯಂತ ಮಳೆ ಸುರಿಯುತ್ತಿದ್ದರೂ ಮತ ಎಣಿಕೆ ಕೇಂದ್ರಗಳ ಎದುರು ಕಾರ್ಯಕರ್ತರ ದಂಡೇ ನೆರೆದಿದೆ.

2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು 60 ರಲ್ಲಿ 41 ಸ್ಥಾನಗಳನ್ನು ಜಯಿಸಿತ್ತು. ಜೆಡಿಯು 7, ಎನ್‌ಪಿಪಿ 5, ಕಾಂಗ್ರೆಸ್‌ 4 ಮತ್ತು ಪಿಪಿಎ 1 ಸ್ಥಾನ ಗೆದ್ದುಕೊಂಡಿದ್ದರೆ, ಎರಡು ಸ್ಥಾನಗಳಲ್ಲಿ ಪಕ್ಷೇತರರು ಜಯಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT