ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Arunachal Pradesh Assembly Result 2024: ಬಿಜೆಪಿಗೆ ಗೆಲುವು; ಮೋದಿ ಅಭಿನಂದನೆ

Published 2 ಜೂನ್ 2024, 10:34 IST
Last Updated 2 ಜೂನ್ 2024, 10:34 IST
ಅಕ್ಷರ ಗಾತ್ರ

ಇಟಾನಗರ: ಅರುಣಾಚಲ ಪ್ರದೇಶ ರಾಜ್ಯದ ವಿಧಾನಸಭೆ ಚುನಾವಣೆಯ ಫಲಿತಾಂಶವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಇಲ್ಲಿ ಬಿಜೆಪಿ ಹ್ಯಾಟ್ರಿಕ್‌ ಗೆಲುವು ದಾಖಲಿಸಿದೆ. 

ಅರುಣಾಚಲದ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯ ಮತದಾನ ಏಪ್ರಿಲ್‌ 19 ರಂದು ಏಕಕಾಲದಲ್ಲಿ ನಡೆದಿತ್ತು. ಲೋಕಸಭಾ ಚುನಾವಣೆಯ ಮತ ಎಣಿಕೆ ಮಂಗಳವಾರ (ಜೂ 4) ನಡೆಯಲಿದೆ. 

ಈ ಸಲ ಬಿಜೆಪಿ 46 ಸ್ಥಾನಗಳನ್ನು ಗೆದ್ದುಕೊಳ್ಳುವ ಮೂಲಕ ಭರ್ಜರಿ ಜಯ ದಾಖಲಿಸುವ ಮೂಲಕ ಹ್ಯಾಟ್ರಿಕ್‌ ಗೆಲುವು ದಾಖಲಿಸಿದೆ.

60 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ–46, ಎನ್‌ಪಿಇಪಿ–05, ಎನ್‌ಸಿಪಿ–03, ಪಿಪಿಎ–02 ಮತ್ತು ಪಕ್ಷೇತರರು ಮೂರು ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ.  

ಅರುಣಾಚಲದಲ್ಲಿ ಬಿಜೆಪಿ ಗೆಲುವಿಗೆ ಪ್ರಧಾನಿ ಮೋದಿ ಸ್ಥಳೀಯ ಬಿಜೆಪಿ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಹಾಗೂ ಪಕ್ಷವನ್ನು ಬೆಂಬಲಿಸಿದ ಜನತೆಗೆ ಧನ್ಯವಾದವನ್ನು ತಿಳಿಸಿದ್ದಾರೆ.

ಅರುಣಾಚಲದ ಜನರು ರಾಜ್ಯದ ಅಭಿವೃದ್ದಿಗಾಗಿ ಜನಾದೇಶ ನೀಡಿದ್ದಾರೆ. ಜನತೆ ಬಿಜೆಪಿ ಮೇಲೆ ನಂಬಿಕೆ, ವಿಶ್ವಾಸ ಇಟ್ಟಿರುವುದಕ್ಕೆ ಅವರಿಗೆ ಅವರಿಗೆ ನನ್ನ ಕೃತಜ್ಞತೆಗಳು ಎಂದು ಹೇಳಿದ್ದಾರೆ. ನಮ್ಮ ಪಕ್ಷವು ರಾಜ್ಯದ ಬೆಳವಣಿಗೆಗಾಗಿ ಇನ್ನೂ ಹುರುಪಿನಿಂದ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು 60 ರಲ್ಲಿ 41 ಸ್ಥಾನಗಳನ್ನು ಜಯಿಸಿತ್ತು. ಜೆಡಿಯು 7, ಎನ್‌ಪಿಪಿ 5, ಕಾಂಗ್ರೆಸ್‌ 4 ಮತ್ತು ಪಿಪಿಎ 1 ಸ್ಥಾನ ಗೆದ್ದುಕೊಂಡಿದ್ದರೆ, ಎರಡು ಸ್ಥಾನಗಳಲ್ಲಿ ಪಕ್ಷೇತರರು ಜಯಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT