ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನೊಳಗೆ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಯೋಗಿ ಆದಿತ್ಯನಾಥ

Published 18 ಮೇ 2024, 15:48 IST
Last Updated 18 ಮೇ 2024, 15:48 IST
ಅಕ್ಷರ ಗಾತ್ರ

ಮಾಲೆಗಾಂವ್: ಕಾಂಗ್ರೆಸ್ ಪಕ್ಷವು ಪಿತ್ರಾರ್ಜಿತ ಆಸ್ತಿ ತೆರಿಗೆ ವಿಧಿಸಲು ಹೊರಟಿದೆ ಎಂಬ ಆರೋಪವನ್ನು ಪುನರುಚ್ಚರಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಕಾಂಗ್ರೆಸ್‌ನೊಳಗೆ ಔರಂಗಜೇಬನ ಆತ್ಮ ಸೇರಿಕೊಂಡಿದೆ ಎಂದು ಶನಿವಾರ ಹೇಳಿದರು.

ಅವರು ಪಿತ್ರಾರ್ಜಿತ ಆಸ್ತಿ ತೆರಿಗೆಯನ್ನು ಔರಂಗಬೇಬ್ ವಿಧಿಸಿದ್ದ ‘ಜಿಜ್ಯಾ’ ತೆರಿಗೆಗೆ ಹೋಲಿಸಿದರು.

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೇಗಾಂವ್‌ ಪಟ್ಟಣದಲ್ಲಿ ಚುನಾವಣಾ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ಬಿಜೆಪಿಯು ಕೇವಲ ಅಧಿಕಾರಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸದೇ, ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಸ್ಪರ್ಧಿಸುತ್ತಿದೆ’ ಎಂದು ಪ್ರತಿಪಾದಿಸಿದರು.

‘ಪಾಕಿಸ್ತಾನದ ಪರ ಇರುವವರು ಅಲ್ಲಿಗೇ ಹೋಗಿ ಭಿಕ್ಷೆ ಬೇಡಿ. ಆ ದೇಶವನ್ನು ಹೊಗಳುವವರಿಗೆ ಭಾರತದಲ್ಲಿ ಜಾಗವಿಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT