ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಶ್ಚಿಮ ಬಂಗಾಳ|ವಿವಿಯಲ್ಲಿ ಸಭೆ ನಡೆಸಿದ ಶಿಕ್ಷಣ ಸಚಿವರ ವಜಾಕ್ಕೆ ರಾಜ್ಯಪಾಲರ ಸೂಚನೆ

Published 4 ಏಪ್ರಿಲ್ 2024, 15:59 IST
Last Updated 4 ಏಪ್ರಿಲ್ 2024, 15:59 IST
ಅಕ್ಷರ ಗಾತ್ರ

ಕೋಲ್ಕತ್ತ: ಗೌರ್ ಬಂಗಾ ವಿಶ್ವವಿದ್ಯಾಲಯದಲ್ಲಿ ರಾಜಕಾರಣಿಗಳ ಸಭೆ ನಡೆಸುವ ಮೂಲಕ ಉದ್ದೇಶಪೂರ್ವಕವಾಗಿಯೇ ಚುನಾವಣಾ ಮಾದರಿ ನೀತಿ ಸಂಹಿತೆ(ಎಂಸಿಸಿ) ಉಲ್ಲಂಘಿಸಿರುವ ಪಶ್ಚಿಮ ಬಂಗಾಳದ ಶಿಕ್ಷಣ ಸಚಿವ ಭ್ರತ್ಯ ಬಸು ಅವರನ್ನು ಸಂಪುಟದಿಂದ ವಜಾ ಮಾಡುವಂತೆ ರಾಜ್ಯಪಾಲ ಆನಂದ ಬೋಸ್ ಅವರು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.

ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಾಧಿಪತಿಯೂ ಆಗಿರುವ ರಾಜ್ಯಪಾಲರು, ಶಿಕ್ಷಣ ಸಂಸ್ಥೆಯ ಆವರಣದಲ್ಲಿ ರಾಜಕೀಯ ಸಭೆ ನಡೆಸಿರುವುದು ವಿಶ್ವವಿದ್ಯಾಲಯಕ್ಕೆ ಅಪಖ್ಯಾತಿ ತಂದಿದೆ ಎಂದೂ ಹೇಳಿದ್ದಾರೆ.

‘ಮಾರ್ಚ್ 30ರಂದು ಗೌರ್ ಬಂಗಾ ವಿಶ್ವವಿದ್ಯಾಲಯದಲ್ಲಿ ಬಸು ನೇತೃತ್ವದಲ್ಲಿ ಸಚಿವರು, ಸಂಸದರು, ಶಾಸಕರು ಮತ್ತು ಇತರ ರಾಜಕೀಯ ನಾಯಕರ ಸಭೆ ನಡೆದಿರುವ ವಿಷಯ ಬಹಿರಂಗವಾಗಿದ್ದು, ಬಸು ಉದ್ದೇಶಪೂರ್ವಕವಾಗಿಯೇ ನೀತಿ ಸಂಹಿತೆ ಉಲ್ಲಂಘಿಸಿರುವುದರಿಂದ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅವರನ್ನು ಸಂಪುಟದಿಂದ ವಜಾ ಮಾಡಬೇಕು’ ಎಂದು ರಾಜ್ಯಪಾಲರ ಸೂಚಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಗೌರ್ ವಿಶ್ವವಿದ್ಯಾಲಯ ಮಾಲ್ಡಾ ಜಿಲ್ಲೆಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT