ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾ: ಬಿಜೆಪಿಯ 112 ಅಭ್ಯರ್ಥಿಗಳ ಘೋಷಣೆ

Published 2 ಏಪ್ರಿಲ್ 2024, 13:42 IST
Last Updated 2 ಏಪ್ರಿಲ್ 2024, 13:42 IST
ಅಕ್ಷರ ಗಾತ್ರ

ಭುವನೇಶ್ವರ: ಒಡಿಶಾದ ವಿಧಾನಸಭಾ ಚುನಾವಣೆಗಾಗಿ ಬಿಜೆಪಿಯು ಮಂಗಳವಾರ 112 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಹಾಲಿ 22 ಶಾಸಕರ ಪೈಕಿ ಪಕ್ಷವು 21 ಮಂದಿಗೆ ಟಿಕೆಟ್ ನೀಡಿದೆ.           

ಪಟ್ಟಿಯಲ್ಲಿ ಎಂಟು ಮಹಿಳೆಯರಿಗೆ ಸ್ಥಾನ ನೀಡಲಾಗಿದೆ. ಒಡಿಶಾ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮನಮೋಹನ್ ಸಮಾಲ್ ಚಾಂದ್‌ಬಾಲಿ ಕ್ಷೇತ್ರದಿಂದ ಸ್ಪರ್ಧಿಸಿದರೆ, ಹಿಂಜಿಲಿ ಕ್ಷೇತ್ರದಿಂದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ವಿರುದ್ಧ ಶಿಶಿರ್ ಮಿಶ್ರಾ ಅವರು ಕಣಕ್ಕಿಳಿಯಲಿದ್ದಾರೆ. ಒಡಿಶಾ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜಯನಾರಾಯಣ ಮಿಶ್ರಾ ಸಂಬಲ್‌ಪುರದಿಂದ ಸ್ಪರ್ಧಿಸುವರು.

ಬಿಜೆಡಿಯಿಂದ ಬಿಜೆಪಿಗೆ ಬಂದಿರುವ ಐವರಿಗೆ ಟಿಕೆಟ್ ನೀಡಲಾಗಿದೆ. ‘ಬಿಜೆಡಿ 72 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದರೆ, ಬಿಜೆಪಿ 112 ಉಮೇದುವಾರರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಎಲ್ಲ ಕಡೆಗಳಲ್ಲೂ ಪ್ರಬಲ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿದ್ದೇವೆ’ ಎಂದು ಬಿಜೆಪಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT