ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಯನಾಡ್: ಬಿಜೆಪಿ ಅಭ್ಯರ್ಥಿ ವಿರುದ್ಧ 242 ಪ್ರಕರಣಗಳು

Published 29 ಮಾರ್ಚ್ 2024, 16:03 IST
Last Updated 29 ಮಾರ್ಚ್ 2024, 16:03 IST
ಅಕ್ಷರ ಗಾತ್ರ

ಕೊಚ್ಚಿ: ಕೇರಳದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಸುರೇಂದ್ರನ್‌ ವಿರುದ್ಧ ಬರೋಬ್ಬರಿ 242 ಪ್ರಕರಣಗಳಿವೆ.

ಚುನಾವಣೆಯ ಹಿನ್ನೆಲೆಯಲ್ಲಿ ಸುರೇಂದ್ರನ್ ಅವರು ತಮ್ಮ ವಿರುದ್ಧದ ಪ್ರಕರಣಗಳ ವಿವರಗಳನ್ನು ಪಕ್ಷದ ಮುಖವಾಣಿಯಲ್ಲಿ ಮೂರು ಪುಟಗಳಲ್ಲಿ ಪ್ರಕಟಿಸಿದ್ದಾರೆ.

ಇದೇ ರೀತಿ ಎರ್ನಾಕುಳಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್‌.ರಾಧಾಕೃಷ್ಣನ್ ಅವರ ವಿರುದ್ಧ 211 ಪ್ರಕರಣಗಳು ದಾಖಲಾಗಿವೆ. 

‘ಹೆಚ್ಚಿನ ಪ್ರಕರಣಗಳು 2018ರಲ್ಲಿ ನಡೆದ ಶಬರಿಮಲೆ ಪ್ರತಿಭಟನೆಗಳಿಗೆ ಸಂಬಂಧಿಸಿದವು. ಬಹುತೇಕ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಪಕ್ಷವು ಮುಷ್ಕರ ಅಥವಾ ಪ್ರತಿಭಟನೆಗೆ ಕರೆ ನೀಡಿದಾಗ ಪೊಲೀಸರು ಅದಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸುತ್ತಾರೆ’ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಾರ್ಜ್ ಕುರಿಯನ್ ಪಿಟಿಐಗೆ ತಿಳಿಸಿದರು.

ಸುರೇಂದ್ರನ್, ರಾಧಾಕೃಷ್ಣನ್, ಆಲಪ್ಪುಳ ಕ್ಷೇತ್ರದ ಅಭ್ಯರ್ಥಿ ಶೋಭಾ ಸುರೇಂದ್ರನ್ ಅವರ ವಿರುದ್ಧದ ಪ್ರಕರಣಗಳ ವಿವರಗಳನ್ನು ಶುಕ್ರವಾರ ‘ಎಕ್ಸ್‌’ ವೇದಿಕೆಯಲ್ಲಿ ಹಂಚಿಕೊಂಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್, ‘ಭಾರತದ ಕೆಲವು ಭಾಗಗಳಲ್ಲಿ ರಾಷ್ಟ್ರೀಯವಾದಿಯಾಗಿರುವುದು ಕಷ್ಟ’ ಎಂದು ಉಲ್ಲೇಖಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT