ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls: ನೀತಿ ಸಂಹಿತೆ ಉಲ್ಲಂಘನೆ ಆರೋಪ; BJPಯ ನವನೀತ್ ವಿರುದ್ಧ ಪ್ರಕರಣ

Published 10 ಮೇ 2024, 15:49 IST
Last Updated 10 ಮೇ 2024, 15:49 IST
ಅಕ್ಷರ ಗಾತ್ರ

ಹೈದರಾಬಾದ್: ‘ಕಾಂಗ್ರೆಸ್‌ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ’ ಎಂಬ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಾದ್‌ನಗರದಲ್ಲಿ ಮೇ 8ರಂದು ಚುನಾವಣಾ ಭಾಷಣ ಮಾಡಿದ್ದ ನವನೀತ್, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅವರು ಅಲ್ಲಿ ಆಡಿದ ಮಾತುಗಳು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಚುನಾವಣಾ ಆಯೋಗದ ವಿಚಕ್ಷಣ ದಳದ ಸಿಬ್ಬಂದಿ ಮೇ 9ರಂದು ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತೊಂದೆಡೆ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹಾಗೂ ಅವರ ಸೋದರ ಅಕ್ಬರುದ್ದೀನ್ ಓವೈಸಿ ವಿರುದ್ಧ ವಾಗ್ದಾಳಿ ನಡೆಸಿದ್ದ ನವನೀತ್‌ ರಾಣಾ, ‘15 ಸೆಕೆಂಡುಗಳ ಕಾಲ ಪೊಲೀಸರನ್ನು ಹಿಂದಕ್ಕೆ ಪಡೆಯಿರಿ. ಈ ಇಬ್ಬರು ಸೊದರರು ಎಲ್ಲಿಂದ ಬಂದರು ಮತ್ತು ಎಲ್ಲಿ ಹೋದರು ಎಂಬುದೇ ತಿಳಿಯದಂತೆ ಮಾಡುತ್ತೇವೆ’ ಎಂದಿದ್ದರು. 

ಜತೆಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಕುರಿತೂ ನವನೀತ್ ಮಾತನಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT