ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್‌ ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್‌ಐಆರ್‌

Published 22 ಏಪ್ರಿಲ್ 2024, 15:43 IST
Last Updated 22 ಏಪ್ರಿಲ್ 2024, 15:43 IST
ಅಕ್ಷರ ಗಾತ್ರ

ಹೈದರಾಬಾದ್: ಮುಸ್ಲಿಮರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ ಆರೋಪದಲ್ಲಿ ಹೈದರಾಬಾದ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಮಾಧವಿ ಲತಾ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ಮಾಧವಿ ಅವರು ಮಸೀದಿಯತ್ತ ಬಾಣ ಬಿಡುವಂತೆ ಸನ್ನೆ ಮಾಡಿದ ವಿಡಿಯೊವೊಂದು ಹರಿದಾಡಿತ್ತು. ಮಾಧವಿ ಅವರು ಮುಸ್ಲಿಮರ ಭಾವನೆಗಳಿಗೆ ನೋವುಂಟುಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಅಭ್ಯರ್ಥಿ, ‘ಅದು ನೈಜ ವಿಡಿಯೊ ಅಲ್ಲ. ಎಫ್‌ಐಆರ್‌ ವಿರುದ್ಧ ಚುನಾವಣಾ ಆಯೋಗದ ಮೊರೆ ಹೋಗುತ್ತೇನೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT