ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ಪಿ ಸಂಸದ ಆರ್‌ಎಲ್‌ಡಿಗೆ

Published 11 ಏಪ್ರಿಲ್ 2024, 13:26 IST
Last Updated 11 ಏಪ್ರಿಲ್ 2024, 13:26 IST
ಅಕ್ಷರ ಗಾತ್ರ

ನವದೆಹಲಿ: ಬಿಎಸ್‌ಪಿ ಮುಖಂಡ ಹಾಗೂ ಸಂಸದ ಮಲೂಕ್ ನಗರ್ ಅವರು ಜಯಂತ್‌ ಚೌಧರಿ ನೇತೃತ್ವದ ರಾಷ್ಟ್ರೀಯ ಲೋಕ ದಳಕ್ಕೆ (ಆರ್‌ಎಲ್‌ಡಿ) ಗುರುವಾರ ಸೇರ್ಪಡೆಯಾದರು.

ಮಲೂಕ್‌ ಅವರು ಉತ್ತರ ಪ್ರದೇಶದ ಬಿಜ್ನೋರ್‌ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಬಿಜ್ನೋರ್‌ ಪ್ರದೇಶದಲ್ಲಿ ಆರ್‌ಎಲ್‌ಡಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸುವುದಾಗಿ ಮಲೂಕ್‌ ಅವರು ತಿಳಿಸಿದರು. ಆರ್‌ಎಲ್‌ಡಿಯು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ಜೊತೆಗಿದೆ.

ಕಾಂಗ್ರೆಸ್‌ನ ಮಾಜಿ ವಕ್ತಾರ ಬಿಜೆಪಿಗೆ:

ಕಾಂಗ್ರೆಸ್‌ನ ಮಾಜಿ ವಕ್ತಾರ ರೋಹನ್‌ ಗುಪ್ತಾ ಅವರು ಗುರುವಾರ ಬಿಜೆಪಿಗೆ ಸೇರ್ಪಡೆಗೊಂಡರು. ಕೇಂದ್ರ ಸಚಿವ ಹರ್‌ದೀಪ್‌ ಸಿಂಗ್‌ ಪುರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್‌ ತಾವ್ಡೆ ಅವರ ಸಮ್ಮುಖದಲ್ಲಿ ರೋಹನ್‌ ಅವರು ಇತರ ಮುಖಂಡರ ಜತೆ ಪಕ್ಷಕ್ಕೆ ಸೇರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT