ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls 2024: ಬಹುಜನ ಸಮಾಜ ಪಕ್ಷ ಬಿಜೆಪಿಯ ಬಿ ಟೀಂ– ಡ್ಯಾನಿಶ್ ಅಲಿ

Published 23 ಏಪ್ರಿಲ್ 2024, 10:45 IST
Last Updated 23 ಏಪ್ರಿಲ್ 2024, 10:45 IST
ಅಕ್ಷರ ಗಾತ್ರ

ನವದೆಹಲಿ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಬಿ ಟೀಂ ಆಗಿ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್‌ ನಾಯಕ ಡ್ಯಾನಿಶ್ ಅಲಿ ಹೇಳಿದ್ದಾರೆ.

ಈ ಹಿಂದೆ ಬಿಎಸ್‌ಪಿಯಲ್ಲಿ ಸಂಸದರಾಗಿದ್ದ ಅವರು ಇತ್ತೀಚೆಗೆ ಕಾಂಗ್ರೆಸ್‌ ಸೇರಿದ್ದಾರೆ. ಉತ್ತರಪ್ರದೇಶದ ಅಮ್ರೋಹ ಲೋಕಸಭಾ ಕ್ಷೇತ್ರದಿಂದ ಅವರು ಸ್ಪರ್ಧಿಸಿದ್ದಾರೆ.

ಚುನಾವಣೆ ಸಮಾವೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ವಿರುದ್ಧ ಟೀಕೆ ಮಾಡಿರುವುದು ಅವರ ಹತಾಶೆಯನ್ನು ತೋರಿಸುತ್ತದೆ ಎಂದರು. ಕಳೆದ 5 ವರ್ಷಗಳಲ್ಲಿ ಸದನದಲ್ಲಿ ಆಡಳಿತ ಪಕ್ಷವನ್ನು ನಾನು ಹಲವು ಸಲ ಇಕ್ಕಟ್ಟಿಗೆ ಸಿಲುಕಿಸಿದ್ದೇನೆ. ಆದ್ದರಿಂದ ಬಿಜೆಪಿಯವರಿಗೆ ನಾನು ಸದನದ ಒಳಗೆ ಬರಲು ಇಷ್ಟವಿಲ್ಲ ಈ ಕಾರಣಕ್ಕೆ ಅವರು ಚುನಾವಣೆಯಲ್ಲಿ ನನ್ನ ವಿರುದ್ಧ ತಮ್ಮ ಸಂಪೂರ್ಣ ಶಕ್ತಿಯನ್ನು ವ್ಯಯಿಸುತ್ತಿದ್ದಾರೆ ಎಂದರು.

ಕಳೆದ ಎರಡು ವಾರಗಳಲ್ಲಿ ಮುಖ್ಯಮಂತ್ರಿ (ಯೋಗಿ ಆದಿತ್ಯನಾಥ್) ಅಮ್ರೋಹಕ್ಕೆ ಎರಡು ಸಲ ಬಂದಿದ್ದಾರೆ. ಇಡೀ ಬಿಜೆಪಿಯ ನಾಯಕರು ಇಲ್ಲೇ ಇದ್ದಾರೆ. ಇದನ್ನು ನಾನು ಸವಾಲಾಗಿ ಸ್ವೀಕರಿಸುತ್ತೇನೆ ಎಂದು ಡ್ಯಾನಿಶ್ ಅಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT