ನವದೆಹಲಿ: ಬಿಜೆಪಿ ಮತ್ತು ‘ಇಂಡಿಯಾ’ ಒಕ್ಕೂಟದ ಅಬ್ಬರದ ಘೋಷಣೆ, ವಾಗ್ದಾಳಿಗಳ ನಡುವೆಯೇ 5ನೇ ಹಂತದ ಮತದಾನದ ಬಹಿರಂಗ ಪ್ರಚಾರ ಶನಿವಾರ ಅಂತ್ಯಗೊಂಡಿದೆ. ಈ ಹಂತದಲ್ಲಿ ಸೋಮವಾರ ಎಂಟು ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳ ಚುನಾವಣೆ ನಡೆಯಲಿದೆ.

ಐದನೇ ಹಂತದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ರಾಯ್ಬರೇಲಿ), ಬಿಜೆಪಿಯ ಸ್ಮೃತಿ ಇರಾನಿ (ಅಮೇಠಿ), ಕೇಂದ್ರ ಸಚಿವರಾದ ರಾಜನಾಥ ಸಿಂಗ್ (ಲಖನೌ), ಪೀಯೂಷ್ ಗೋಯಲ್ (ಮುಂಬೈ ಉತ್ತರ), ಒಮರ್ ಅಬ್ದುಲ್ಲಾ (ಬಾರಾಮುಲ್ಲಾ) ಮತ್ತು ಆರ್ಜೆಡಿಯ ರೋಹಿಣಿ ಆಚಾರ್ಯ ಅವರಂತಹ ಪ್ರತಿಷ್ಠಿತರ ಕ್ಷೇತ್ರಗಳಲ್ಲಿ ಮತದಾನವು ನಡೆಯಲಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಈ 49 ಕ್ಷೇತ್ರಗಳ ಪೈಕಿ 32ರಲ್ಲಿ ಬಿಜೆಪಿ ಗೆದ್ದಿತ್ತು. ಕಾಂಗ್ರೆಸ್ ರಾಯ್ಬರೇಲಿಯಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ’ಇಂಡಿಯಾ’ ಕೂಟವು ಕೇವಲ 6 ಕ್ಷೇತ್ರಗಳಲ್ಲಿ ಗೆದ್ದಿತ್ತು. ಬಿಜೆಡಿ ಎರಡು ಹಾಗೂ ಎನ್ಡಿಎ 41 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು.

ಈ ಬಾರಿ, ಬಿಜೆಪಿ 40 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೆ, ಕಾಂಗ್ರೆಸ್ ಕೇವಲ 18 ಕ್ಷೇತ್ರಗಳಲ್ಲಿ ಅಖಾಡಕ್ಕಿಳಿದಿದೆ. ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಬಿಹಾರದ ಉಳಿದ ಕ್ಷೇತ್ರಗಳನ್ನು ‘ಇಂಡಿಯಾ’ ಕೂಟದ ತನ್ನ ಮಿತ್ರಪಕ್ಷಗಳಿಗೆ ಬಿಟ್ಟುಕೊಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.