ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್ | ಚಂಪೈ ಸೊರೇನ್ ಹೆಸರಿಗಷ್ಟೇ ಸಿಎಂ, ಕಲ್ಪನಾ ಅವರದ್ದೇ ಆಡಳಿತ: ಬಿಜೆಪಿ

Published 14 ಏಪ್ರಿಲ್ 2024, 10:53 IST
Last Updated 14 ಏಪ್ರಿಲ್ 2024, 10:53 IST
ಅಕ್ಷರ ಗಾತ್ರ

ಜಮ್ಶೆಡ್‌ಪುರ: ಜಾರ್ಖಂಡ್‌ನಲ್ಲಿ ಚಂಪೈ ಸೊರೇನ್‌ ಅವರು ಹೆಸರಿಗಷ್ಟೇ ಮುಖ್ಯಮಂತ್ರಿಯಾಗಿದ್ದಾರೆ. ಮಾಜಿ ಸಿಎಂ ಹೇಮಂತ ಸೊರೇನ್‌ ಪತ್ನಿ ಕಲ್ಪನಾ ಅವರೇ ಅಧಿಕಾರ ನಡೆಸುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಅಮರ್‌ ಕುಮಾರ್‌ ಬೌರಿ ಭಾನುವಾರ ಆರೋಪಿಸಿದ್ದಾರೆ.

ಪ್ರತಿಕಾಗೋಷ್ಟಿಯಲ್ಲಿ ಮಾತನಾಡಿರುವ ಬಿಜೆಪಿ ನಾಯಕ ಅಮರ್‌, 'ಮುಖ್ಯಮಂತ್ರಿಯಾಗಿದ್ದರೂ ತಾವು (ಚಂಪೈ ಸೊರೇನ್‌) ಅಸಹಾಯಕರಾಗಿರುವುದೇಕೆ? ಲೋಕಸಭೆ ಚುನಾವಣೆ ಹೊತ್ತಿನಲ್ಲೂ ಜೆಎಂಎಂ ಪಕ್ಷ ತಮಗೆ ಪ್ರಾತಿನಿಧ್ಯ ನೀಡುತ್ತಿಲ್ಲವೇಕೆ? ಹಾಗೂ ಕಲ್ಪನಾ ಅವರು ಸರ್ಕಾರ ಅಥವಾ ಪಕ್ಷದಲ್ಲಿ ಯಾವುದೇ ಸ್ಥಾನ ಹೊಂದಿಲ್ಲದಿದ್ದರೂ, ಯಾವ ಸಾಮರ್ಥ್ಯದ ಮೇಲೆ ಎಲ್ಲ ಸಭೆಗಳ ಅಧ್ಯಕ್ಷತೆ ವಹಿಸುತ್ತಿದ್ದಾರೆ ಎಂದು ಚಂಪೈ ಸೊರೇನ್‌ ಅವರನ್ನು ಕೇಳಲು ಬಯಸುತ್ತೇನೆ' ಎಂದು ಹೇಳಿದ್ದಾರೆ.

ಕಲ್ಪನಾ ಅವರು ರಾಜಕೀಯಕ್ಕೆ ಪ್ರವೇಶಿಸುತ್ತಿರುವುದು ಕುಟುಂಬ ರಾಜಕಾರಣಕ್ಕೆ ಅತ್ಯುತ್ತಮ ಉದಾಹರಣೆ ಎಂದಿರುವ ಅಮರ್‌, ಕಲ್ಪನಾ ಅವರನ್ನು ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಅವರಿಗೆ ಹೋಲಿಸಿದ್ದಾರೆ. ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದಾಗ ಸೋನಿಯಾ ಅವರದ್ದೇ ಆಡಳಿತವಾಗಿತ್ತು ಎಂದು ದೂರಿದ್ದಾರೆ.

ರಾಜ್ಯದಲ್ಲಿರುವ ಎಲ್ಲ 14 ಲೋಕಸಭೆ ಕ್ಷೇತ್ರಗಳಲ್ಲೂ ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ' ಜಯ ಸಾಧಿಸಲಿದೆ ಎಂದು ಚಂಪೈ ಸೊರೇನ್‌ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಅಮರ್‌, ಮುಖ್ಯಮಂತ್ರಿ ಅವರು 'ಹಗಲುಗನಸು ಕಾಣುತ್ತಿದ್ದಾರೆ' ಎಂದು ವ್ಯಂಗ್ಯವಾಡಿದ್ದಾರೆ.

'ಇಂಡಿಯಾ ಮೈತ್ರಿಕೂಟವು ಜಮ್ಶೆಡ್‌ಪುರ ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿ ಕಣಕ್ಕಿಳಿಸಲು ಹೆಣಗಾಡುತ್ತಿದೆ. ಆದರೂ, ಎಲ್ಲ 14 ಕ್ಷೇತ್ರಗಳಲ್ಲೂ ಗೆಲ್ಲುವುದಾಗಿ ಹೇಳಿಕೊಳ್ಳುತ್ತಿದೆ. ಈ ಹೇಳಿಕೆಯು ಮುಖ್ಯಮಂತ್ರಿಯವರು ಜನರ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ' ಎಂದು ತಿವಿದಿದ್ದಾರೆ.

ಮುಖ್ಯಮಂತ್ರಿಯಾಗಿರುವ ಚಂಪೈ ಅವರು ಇಂಡಿಯಾ ಒಕ್ಕೂಟದ ಪರ ಪ್ರಚಾರ ಆರಂಭಿಸಬೇಕಿತ್ತು. ಆದರೆ, ಅವರನ್ನು ಸೆರೈಕೆಲಾ–ಖಾರ್ಸಾವಾನ್‌ ಜಿಲ್ಲೆಯ ಅವರ ಸ್ವಂತ ಕ್ಷೇತ್ರ ಸೆರೈಕೆಲಾಗೆ ಸೀಮಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT