ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಿಧಾನಗತಿಯ ಮತ ಎಣಿಕೆ: ಕಾಂಗ್ರೆಸ್ ದೂರು

Published 4 ಜೂನ್ 2024, 14:14 IST
Last Updated 4 ಜೂನ್ 2024, 14:14 IST
ಅಕ್ಷರ ಗಾತ್ರ

ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ, ಅದರಲ್ಲೂ ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳಲ್ಲಿ ಮತ ಎಣಿಕೆಯು ನಿಧಾನಗತಿಯಲ್ಲಿ ನಡೆದಿದೆ ಎಂದು ಕಾಂಗ್ರೆಸ್ ನಿಯೋಗ ಆರೋಪಿಸಿದೆ. 

ಈ ಸಂಬಂಧ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯೋಗದ ಇತರೆ ಆಯುಕ್ತರನ್ನು ಭೇಟಿ ಮಾಡಿದ ಅಭಿಷೇಕ್ ಮನು ಸಿಂಘ್ವಿ ಮತ್ತು ಸಲ್ಮಾನ್ ಖುರ್ಷಿದ್ ಅವರನ್ನು ಒಳಗೊಂಡ ಕಾಂಗ್ರೆಸ್ ನಿಯೋಗವು, ಪ್ರತಿಯೊಂದು ಸುತ್ತಿನ ಮತ ಎಣಿಕೆ ಮುಗಿದ ಕೂಡಲೇ ಅದರ ವಿವರಗಳನ್ನು ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಒತ್ತಾಯಿಸಿತು.  

‘ಪ್ರತಿಯೊಂದು ಸುತ್ತಿನ ಮತ ಎಣಿಕೆ ಮುಗಿದ ಬಳಿಕ ಅದರ ವಿವರಗಳನ್ನು ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ಆದರೆ, ಮಧ್ಯಾಹ್ನ 2.30ರ ವೇಳೆಗೆ ಮತ ಎಣಿಕೆ ಪ್ರಕ್ರಿಯೆಯು ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ತೀರಾ ನಿಧಾನಗತಿಯಲ್ಲಿ ಇರುವುದು ನಮ್ಮ ಗಮನಕ್ಕೆ ಬಂದಿದೆ’ ಎಂದು ಅಭಿಷೇಕ್ ಮನುಸಿಂಘ್ವಿ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT