ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್ ಯತ್ನ: ಪ್ರಧಾನಿ ಮೋದಿ

Published 2 ಮೇ 2024, 9:47 IST
Last Updated 2 ಮೇ 2024, 9:47 IST
ಅಕ್ಷರ ಗಾತ್ರ

ಸುರೇಂದ್ರನಗರ: ಹಿಂದೂಗಳನ್ನು ವಿಭಜಿಸುವ ತುಷ್ಟೀಕರಣದ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಆರೋಪಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇತ್ತೀಚೆಗೆ ಶ್ರೀರಾಮ ಹಾಗೂ ಶಿವನ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ತಿರುಗೇಟು ನೀಡಿದ್ದಾರೆ.

ಗುಜರಾತ್‌ನ ಸುರೇಂದ್ರನಗರ ಹಾಗೂ ಭಾವನಗರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, 'ಹಿಂದೂಗಳ ನಡುವೆ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಬಯಸುತ್ತಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಮ ಮತ್ತು ಶಿವನ ಬಗ್ಗೆ ಅತ್ಯಂತ ಅಪಾಯಕಾರಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯು ದುರುದ್ದೇಶದಿಂದ ಕೂಡಿದೆ. ಹಿಂದೂ ಸಮಾಜವನ್ನು ಒಡೆಯಲು ಸಂಚು ರೂಪಿಸಿದ್ದಾರೆ' ಎಂದು ಹೇಳಿದ್ದಾರೆ.

'ರಾಮ ಮತ್ತು ಶಿವನ ಭಕ್ತರ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಿ ಪರಸ್ಪರ ಹೊಡೆದಾಡಿಕೊಳ್ಳುವಂತೆ ಯತ್ನಿಸಿದ್ದಾರೆ. ಮೊಘಲರಿಗೂ ನಮ್ಮ ಸಾವಿರಾರು ವರ್ಷಗಳ ಸಂಪ್ರದಾಯವನ್ನು ಮುರಿಯಲು ಸಾಧ್ಯವಾಗಲಿಲ್ಲ. ಈಗ ಕಾಂಗ್ರೆಸ್ ಮುರಿಯಲು ಯತ್ನಿಸುತ್ತಿದೆಯೇ? ಕಾಂಗ್ರೆಸ್‌ನ ತುಷ್ಟೀಕರಣ ರಾಜಕಾರಣ ಇಷ್ಟು ಕೀಳುಮಟ್ಟಕ್ಕೆ ಇಳಿದಿದೆಯೇ' ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT