ಜಮುಯ್ (ಬಿಹಾರ): ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ದೇಶಕ್ಕೆ ಅಪಕೀರ್ತಿ ಬಂದಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಆರೋಪಿಸಿದ್ದಾರೆ.

ಜಮುಯ್ನಲ್ಲಿ ಗುರುವಾರ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನದ ಹೆಸರನ್ನು ಉಲ್ಲೇಖಿಸದೆಯೇ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ತಿರುಗೇಟು ನೀಡುತ್ತಿದ್ದು, ಮಗಧ ಸಾಮ್ರಾಜ್ಯದ ಪ್ರಾಚೀನ ವೈಭವ ಮರುಕಳಿಸಿದೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಿರುವ ಆಮ್ ಆದ್ಮಿ ಪಕ್ಷದ (ಎಎಪಿ) ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ಅವರು, ಒಬ್ಬರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದವರೆಲ್ಲ ಈಗ ಮೋದಿ ವಿರುದ್ಧ ದಾಳಿ ನಡೆಸಲು ಒಂದಾಗಿದ್ದಾರೆ ಎಂದು ಟೀಕಿಸಿದರು.

ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಕಳಂಕರಹಿತ ದಾಖಲೆ ಹೊಂದಿದ್ದಾರೆ ಎಂದು ಪ್ರಧಾನಿ ಮೋದಿ ಹೊಗಳಿದರು.

ಬಿಹಾರದಲ್ಲಿ ಎಲ್ಲ 40 ಸ್ಥಾನಗಳಲ್ಲಿ ಎನ್ಡಿಎ ಮೈತ್ರಿ ಗೆಲ್ಲಲು ಜನರು ಬಯಸುತ್ತಾರೆ. ಆ ಮೂಲಕ ದೇಶದಲ್ಲಿ 400ಕ್ಕೂ ಸ್ಥಾನಗಳಲ್ಲಿ ಗೆಲ್ಲಲಿದ್ದೇವೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.