ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

AP polls: 114 ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಅಂತಿಮ

Published 1 ಏಪ್ರಿಲ್ 2024, 10:57 IST
Last Updated 1 ಏಪ್ರಿಲ್ 2024, 10:57 IST
ಅಕ್ಷರ ಗಾತ್ರ

ಅಮರಾವತಿ: ಆಂಧ್ರ ಪ್ರದೇಶದಲ್ಲಿ 5 ಲೋಕಸಭಾ ಕ್ಷೇತ್ರಗಳು ಮತ್ತು 114 ವಿಧಾನಸಭಾ ‌ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ ಎಂದು ಆಂಧ್ರ ಪ್ರದೇಶದ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್‌.ಶರ್ಮಿಳಾ ತಿಳಿಸಿದ್ದಾರೆ.

ದೆಹಲಿಯ ಎಐಸಿಸಿ ಕಚೇರಿಯಲ್ಲಿ ಇಂದು (ಸೋಮವಾರ) ನಡೆದ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವೈ.ಎಸ್‌.ಶರ್ಮಿಳಾ ಪಾಲ್ಗೊಂಡಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‌ಸಭೆಯಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಾಳೆ ಬಿಡುಗಡೆ ಮಾಡಲಾಗುವುದು. ಉಳಿದ ಅಭ್ಯರ್ಥಿಗಳ ಹೆಸರನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಆಂಧ್ರಪ್ರದೇಶದಲ್ಲಿ ಸಿಪಿಐ, ಸಿಪಿಐ (ಎಂ) ಜತೆಗೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿದೆ. 25 ಲೋಕಸಭಾ ಕ್ಷೇತ್ರಗಳ ಹಾಗೂ 175 ವಿಧಾನಸಭಾ ಕ್ಷೇತ್ರಗಳಿಗೆ ಮೇ 13ರಂದು ಏಕಕಾಲಕ್ಕೆ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

ರಾಜ್ಯದಲ್ಲಿ ಆಡಳಿತರೂಢ ವೈಎಸ್‌ಆರ್‌ಸಿಪಿ ಸ್ಪತಂತ್ರವಾಗಿ ಸ್ಪರ್ಧಿಸುತ್ತಿದೆ. ಉಳಿದಂತೆ ತೆಲುಗು ದೇಶಂ (ಟಿಡಿಪಿ), ಜನಸೇನಾ, ಬಿಜೆಪಿ ಮೈತ್ರಿ ಮಾಡಿಕೊಂಡಿವೆ. ಎಲ್ಲಾ ಪಕ್ಷಗಳು ಈಗಾಗಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಪ್ರಚಾರ ಕಾರ್ಯ ಜೋರಾಗಿ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT