ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS polls | ಮಣಿಪುರದ ಕೆಲವೆಡೆ ಮರು ಮತದಾನಕ್ಕೆ ಕಾಂಗ್ರೆಸ್‌ ಆಗ್ರಹ

Published 20 ಏಪ್ರಿಲ್ 2024, 12:37 IST
Last Updated 20 ಏಪ್ರಿಲ್ 2024, 12:37 IST
ಅಕ್ಷರ ಗಾತ್ರ

ಇಂಫಾಲ್: ಮಣಿಪುರದಲ್ಲಿ ಶುಕ್ರವಾರ ಮತದಾನದ ವೇಳೆ ಅಹಿತಕರ ಘಟನೆ ನಡೆದ 47 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಕಾಂಗ್ರೆಸ್‌ ಪಕ್ಷ ಆಗ್ರಹಿಸಿದೆ.

ಮಣಿಪುರದ ಇನ್ನರ್‌ ಮಣಿಪುರ ಮತ್ತು ಔಟರ್‌ ಮಣಿಪುರ ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆದಿದೆ. ಎರಡು ಕಡೆ ಮತಗಟ್ಟೆ ಬಳಿ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದರು. ಅದೇ ರೀತಿ, ಶಸ್ತ್ರಸಜ್ಜಿತ ವ್ಯಕ್ತಿಗಳು ನಿರ್ದಿಷ್ಟ ರಾಜಕೀಯ ಪಕ್ಷದ ಚುನಾವಣಾ ಏಜೆಂಟರನ್ನು ಬೆದರಿಸಿ, ಮತಗಟ್ಟೆಗಳಿಂದ ಹೊರ ಹೋಗುವಂತೆ ಬೆದರಿಸಿದ್ದರು. ಕೆಲವು ಕಡೆದ ಮತಯಂತ್ರಗಳಿಗೆ ಹಾನಿ ಉಂಟುಮಾಡಲಾಗಿತ್ತು.

‘ಇನ್ನರ್‌ ಮಣಿಪುರದ 36 ಮತಗಟ್ಟೆಗಳು ಮತ್ತು ಔಟರ್‌ ಮಣಿಪುರದ 11 ಮತಗಟ್ಟೆಗಳಿಗೆ ಮರು ಮತದಾನ ನಡೆಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ’ ಎಂದು ಮಣಿಪುರ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾದ ಕೆ.ಮೇಘಚಂದ್ರ ಶನಿವಾರ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT