ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್: 4 ಸಿಪಿಐ ಅಭ್ಯರ್ಥಿಗಳ ಘೋಷಣೆ

Published 1 ಏಪ್ರಿಲ್ 2024, 16:12 IST
Last Updated 1 ಏಪ್ರಿಲ್ 2024, 16:12 IST
ಅಕ್ಷರ ಗಾತ್ರ

ರಾಂಚಿ: ಭಾರತೀಯ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಜಾರ್ಖಂಡ್ ಘಟಕವು ಲೋಕಸಭಾ ಚುನಾವಣೆಗಾಗಿ ರಾಜ್ಯದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ.

ಜಾರ್ಖಂಡ್‌ನ 14 ಲೋಕಸಭಾ ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳಲ್ಲಿ ಸಿಪಿಐ ಸ್ಪರ್ಧಿಸಲಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಮಹೇಂದ್ರ ಪಾಠಕ್ ಹೇಳಿದರು. ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ಶೀಘ್ರವೇ ಘೋಷಿಸಲಾಗುವುದು ಎಂದು ತಿಳಿಸಿದರು.

‘ನಾವು ನಮ್ಮ ಶಿಫಾರಸುಗಳನ್ನು ಕಳಿಸಿದ್ದೆವು. ಪಕ್ಷದ ಕೇಂದ್ರ ಕಾರ್ಯಕಾರಿ ಸಮಿತಿಯು ಅಭ್ಯರ್ಥಿಗಳನ್ನು ಅಂತಿಮಗೊಳಿಸಿತು’ ಎಂದು ಹೇಳಿದರು.

ತಾವು ಜಾರ್ಖಂಡ್‌ನಲ್ಲಿ ‘ಇಂಡಿಯಾ’ ಕೂಟದ ಭಾಗವಲ್ಲ. ಹಾಗಾಗಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವುದಾಗಿ ತಿಳಿಸಿದರು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT