ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Lok Sabha Elections: ಸಿಪಿಐ ಪ್ರಣಾಳಿಕೆ ಬಿಡುಗಡೆ, ಭರವಸೆಗಳು ಇಂತಿವೆ

Published 6 ಏಪ್ರಿಲ್ 2024, 11:30 IST
Last Updated 6 ಏಪ್ರಿಲ್ 2024, 11:30 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಭಾರತ ಕಮ್ಯುನಿಸ್ಟ್ ಪಕ್ಷವು (ಸಿಪಿಐ) ಇಂದು (ಶನಿವಾರ) ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ಅಗ್ನಿಪಥ ಯೋಜನೆ ರದ್ದುಪಡಿಸುವ ನಿಟ್ಟಿನಲ್ಲಿ ಹೋರಾಟ ನಡೆಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ವಿವರಿಸಲಾಗಿದೆ.

ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ, ‘ದೇಶದ ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯತೀತ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಉಳಿಸಬೇಕಿದೆ. ಒಕ್ಕೂಟ ವ್ಯವಸ್ಥೆಯ ರಕ್ಷಣೆ ಜನರ ಹಕ್ಕುಗಳನ್ನು ರಕ್ಷಿಸಲು ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವುದು ಅನಿವಾರ್ಯವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಜನರು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳನ್ನು ಸೋಲಿಸಬೇಕು ಆಗ ಮಾತ್ರ ಭಾರತ ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ಉಳಿಯಲು ಸಾಧ್ಯ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಪ್ರಣಾಳಿಕೆಯ ಮುಖ್ಯಾಂಶಗಳು ಇಂತಿವೆ...

* ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ರದ್ದು

* ಅಗ್ನಿಪಥ ಯೋಜನೆ ರದ್ದು

* ಮೀಸಲಾತಿಯ ಶೇ 50ರಷ್ಟು ಮಿತಿ ತೆಗೆದುಹಾಕುವುದು

* ಶೇ 33ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸುವುದು

* ನರೇಗಾ ಅಡಿಯಲ್ಲಿ ₹700 ಕನಿಷ್ಠ ವೇತನದ ಖಾತರಿ

* ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸುವುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT