ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಕಾಂಗ್ರೆಸ್‌: ಇಬ್ಬರು ಮಾಜಿ ಶಾಸಕರ ರಾಜೀನಾಮೆ

Published 1 ಮೇ 2024, 4:49 IST
Last Updated 1 ಮೇ 2024, 4:49 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಕಾಂಗ್ರೆಸ್‌ನ ಮಾಜಿ ಶಾಸಕರಾದ ನೀರಜ್ ಬಸೋಯಾ ಮತ್ತು ನಸೀಬ್‌ ಸಿಂಗ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ  ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ರಾಜೀನಾಮೆ ಸಲ್ಲಿಸಿದ್ದಾರೆ.

ದೆಹಲಿಯಲ್ಲಿ ಎಎಪಿ ಕಳೆದ 7 ವರ್ಷಗಳಿಂದ ಅಧಿಕಾರದಲ್ಲಿದೆ. ಈ ಅವಧಿಯಲ್ಲಿ ಎಎಪಿ ಹಲವಾರು ಹಗರಣಗಳಲ್ಲಿ ಭಾಗಿಯಾಗಿದ್ದು ನಾವು ಮತ್ತೆ ಅವರೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಅವಮಾನಕರಿಯಾಗಿದೆ.

ಈಗಾಗಲೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಎಎಪಿ ಹಿರಿಯ ನಾಯಕರಾದ ಸತ್ಯೇಂದ್ರ ಜೈನ್ ಮತ್ತು ಮನೀಶ್ ಸಿಸೋಡಿಯಾ ಈಗಾಗಲೇ ಜೈಲಿನಲ್ಲಿದ್ದಾರೆ. ಅಲ್ಲದೇ ಪಕ್ಷದ ಇತರೆ ಮುಖಂಡರುಗಳ ವಿರುದ್ಧ ಮದ್ಯ ಹಗರಣ, ಜಲ ಮಂಡಳಿ ಹಗರಣ ಸೇರಿದಂತೆ ವಿವಿಧ  ಗಂಭೀರ ಭ್ರಷ್ಟಾಚಾರದ ಆರೋಪಗಳಿವೆ. ಇಂತಹವರ ಜೊತೆ ನಮ್ಮ ಮೈತ್ರಿ ಸರಿಯಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಬೆಳವಣಿಗೆಗಳಿಂದ ಬೆಸತ್ತು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಅವರು ಪತ್ರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT