ನವದೆಹಲಿ: ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯ (ಡಿಪಿಸಿಸಿ) ಅಧ್ಯಕ್ಷರನ್ನಾಗಿ ದೇವೇಂದ್ರ ಯಾದವ್ ಅವರನ್ನು ನೇಮಕ ಮಾಡಿ ಹೈಕಮಾಂಡ್ ಇಂದು (ಮಂಗಳವಾರ) ಆದೇಶ ಹೊರಡಿಸಿದೆ.

ಈಚೆಗೆ ದೆಹಲಿ ಕಾಂಗ್ರೆಸ್ ಘಟಕದ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಬೆಳವಣಿಗೆಯು, ರಾಷ್ಟ್ರದ ರಾಜಧಾನಿಯಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಡೆಸುತ್ತಿದ್ದ ಸಿದ್ಧತೆಗೆ ಹಿನ್ನಡೆ ಉಂಟುಮಾಡಿತ್ತು.

ದೆಹಲಿ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯ ವಿಚಾರದಲ್ಲಿ ಅಸಮಾಧಾನ ಮತ್ತು ಕಾಂಗ್ರೆಸ್ನ ದೆಹಲಿ ಉಸ್ತುವಾರಿ ದೀಪಕ್ ಬಾಬರಿಯಾ ಅವರ ನಡವಳಿಕೆಯನ್ನು ವಿರೋಧಿಸಿ ಅರವಿಂದರ್ ಅವರು ರಾಜೀನಾಮೆ ನಿರ್ಧಾರ ತೆಗೆದುಕೊಂಡಿದ್ದರು.

‘ನಾನು ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಯಾವುದೇ ಪಕ್ಷವನ್ನು ಸೇರುತ್ತಿಲ್ಲ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ‘ಲವ್ಲಿ ಬಿಜೆಪಿ ಸೇರಲಿದ್ದು, ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಆ ಪಕ್ಷವು ಅವರನ್ನು ಕಣಕ್ಕಿಳಿಸಲಿದೆ’ ಎಂದು ಕಾಂಗ್ರೆಸ್ನ ಮಾಜಿ ಶಾಸಕ ಆಸಿಫ್ ಮೊಹಮ್ಮದ್ ಖಾನ್ ಹೇಳಿಕೆ ನೀಡಿದ ಬೆನ್ನಲ್ಲೇ ಅವರು ಈ ಸ್ಪಷ್ಟೀಕರಣ ಕೊಟ್ಟಿದ್ದರು.

ದೆಹಲಿ ಕಾಂಗ್ರೆಸ್ನಲ್ಲಿ ತಲೆದೋರಿರುವ ಬಿಕ್ಕಟ್ಟು ಬಗೆಹರಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಲವ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಯಾದವ್ ಅವರನ್ನು ನೇಮಕ ಮಾಡಲಾಗಿದೆ.

ಲವ್ಲಿ ಅವರು ಎಐಸಿಸಿ ಅಧ್ಯಕ್ಷರಿಗೆ ಬರೆದ ರಾಜೀನಾಮೆ ಪತ್ರದಲ್ಲಿ, ದೀಪಕ್ ಬಾಬರಿಯಾ ಅವರ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದ್ದರು. ಅಭ್ಯರ್ಥಿಗಳ ಆಯ್ಕೆಯ ವೇಳೆ ದೆಹಲಿ ಘಟಕದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ದೂರಿದ್ದರು.

ಲೋಕಸಭೆ ಚುನಾವಣೆಯಲ್ಲಿ ಎಎಪಿ ಜತೆ ಮೈತ್ರಿ ಮಾಡಿಕೊಳ್ಳುವುದಕ್ಕೆ ದೆಹಲಿ ಘಟಕದ ವಿರೋಧವಿತ್ತು ಎಂಬುದನ್ನೂ ಅವರು ನೆನಪಿಸಿದ್ದಾರೆ. ವಾಯವ್ಯ ದೆಹಲಿ ಕ್ಷೇತ್ರದ ಅಭ್ಯರ್ಥಿ ಉದಿತ್ ರಾಜ್ ಅವರು ಪಕ್ಷದ ಕಾರ್ಯಕರ್ತರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವುದು ಮತ್ತು ಈಶಾನ್ಯ ದೆಹಲಿ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಅವರು ಎಎಪಿ ಸರ್ಕಾರ ಹಾಗೂ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಹೊಗಳಿರುವುದನ್ನೂ ಪತ್ರದಲ್ಲಿ ಟೀಕಿಸಿದ್ದರು.
.ಎಎಪಿ ಜೊತೆ ಮೈತ್ರಿಗೆ ವಿರೋಧ: ದೆಹಲಿ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.