ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಲ್ವಾಮಾದಲ್ಲಿ ಹತರಾದ ಯೋಧರ ಪತ್ನಿಯರ ಮಂಗಳಸೂತ್ರ ಕಸಿದವರು ಯಾರು?: ಡಿಂಪಲ್ ಯಾದವ್

Published 24 ಏಪ್ರಿಲ್ 2024, 23:32 IST
Last Updated 24 ಏಪ್ರಿಲ್ 2024, 23:32 IST
ಅಕ್ಷರ ಗಾತ್ರ

ಉನ್ನಾವ್: ಪ್ರಧಾನಿ ನರೇಂದ್ರ ಮೋದಿ ಅವರ ‘ಮಂಗಳಸೂತ್ರ’ ಹೇಳಿಕೆ ಕುರಿತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ನಾಯಕಿ ಡಿಂಪಲ್‌ ಯಾದವ್, ‘ಪುಲ್ವಾಮಾದಲ್ಲಿ ಹತರಾದ ಸೈನಿಕರ ಪತ್ನಿಯರ ಮಂಗಳಸೂತ್ರವನ್ನು ಯಾರು ಕಿತ್ತುಕೊಂಡರು ಎಂಬುದಕ್ಕೆ ಬಿಜೆಪಿ ಉತ್ತರಿಸಬೇಕು’ ಎಂದು ಆಗ್ರಹಿಸಿದರು.

‘ಮಂಗಳಸೂತ್ರ ಬಗ್ಗೆ ಮಾತನಾಡುವವರು ಪುಲ್ವಾಮಾ ಘಟನೆ ಬಗ್ಗೆಯೂ ಮಾತನಾಡಬೇಕು. ಆ ಘಟನೆಯ ಹಿಂದೆ ಯಾವ ಕೈವಾಡವಿದೆ, ಘಟನೆಗೆ ಸಂಬಂಧಿಸಿದಂತೆ ಸರ್ಕಾರವು ಏನು ಕ್ರಮ ಕೈಗೊಂಡಿದೆ’ ಎಂಬ ಬಗ್ಗೆ ಉತ್ತರಿಸಬೇಕು ಎಂದು ಒತ್ತಾಯಿಸಿದರು.

2019ರ ಫೆಬ್ರುವರಿಯಲ್ಲಿ ಪುಲ್ವಾಮಾದಲ್ಲಿ ಸೈನಿಕರ ವಾಹನದ ಮೇಲೆ ನಡೆದಿದ್ದ ದಾಳಿಯಲ್ಲಿ ಸಿಆರ್‌ಪಿಎಫ್‌ನ 40ಕ್ಕೂ ಅಧಿಕ ಯೋಧರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT