ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

48 ಗಂಟೆ ಪ್ರಚಾರ ಮಾಡದಂತೆ ಸುರ್ಜೇವಾಲಾಗೆ ನಿರ್ಬಂಧ

Published 16 ಏಪ್ರಿಲ್ 2024, 15:26 IST
Last Updated 16 ಏಪ್ರಿಲ್ 2024, 15:26 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿ ಸಂಸದೆ ಹೇಮಾ ಮಾಲಿನಿ ವಿರುದ್ಧದ ಅವಹೇಳನಕಾರಿ ಹೇಳಿಕೆಗಾಗಿ ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೇವಾಲಾ ಅವರಿಗೆ 48 ಗಂಟೆ ಚುನಾವಣಾ ಪ್ರಚಾರ ಮಾಡದಂತೆ ಚುನಾವಣಾ ಆಯೋಗವು ಮಂಗಳವಾರ ನಿರ್ಬಂಧ ಹೇರಿದೆ.

ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಆಯೋಗ ನಿಷೇಧ ಹೇರಿದ ಮೊದಲ ಪ್ರಕರಣ ಇದಾಗಿದೆ.

‘ಘನತೆಯಿಲ್ಲದ, ಅನಾಗರಿಕ ಹಾಗೂ ಅಸಭ್ಯ’ ಹೇಳಿಕೆಯ ಸಂಬಂಧ ಸುರ್ಜೇವಾಲಾ ಅವರಿಗೆ ಚುನಾವಣಾ ಆಯೋಗವು ಕಳೆದ ಮಂಗಳವಾರ ಕಾರಣ ಕೇಳಿ ನೋಟಿಸ್ ಜಾರಿ ಮಾಡಿತ್ತು. ಅದಕ್ಕೆ ಸುರ್ಜೇವಾಲಾ ನೀಡಿದ್ದ ಪ್ರತಿಕ್ರಿಯೆಯನ್ನು ಸೂಕ್ಷ್ಮವಾಗಿ ಅವಲೋಕಿಸಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.       

ಸುರ್ಜೇವಾಲಾ ಅವರ ಹೇಳಿಕೆ, ಆಯೋಗವು ಕಳೆದ ತಿಂಗಳು ಪಕ್ಷಗಳಿಗೆ ವಿತರಿಸಿದ್ದ ನೀತಿ ಸಂಹಿತೆ ಮತ್ತು ಸಲಹೆಗಳ ಸ್ಪಷ್ಟ ಉಲ್ಲಂಘನೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT