ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೆಲಿಕಾಪ್ಟರ್‌ ತಪಾಸಣೆ

Published 15 ಏಪ್ರಿಲ್ 2024, 13:10 IST
Last Updated 15 ಏಪ್ರಿಲ್ 2024, 13:10 IST
ಅಕ್ಷರ ಗಾತ್ರ

ನೀಲಗಿರೀಸ್, ತಮಿಳುನಾಡು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಪ್ರಯಾಣಿಸಿದ ಹೆಲಿಕಾಪ್ಟರ್‌ಅನ್ನು ಚುನಾವಣಾ ಅಧಿಕಾರಿಗಳು ಸೋಮವಾರ ತಪಾಸಣೆ ನಡೆಸಿದರು.

ರಾಹುಲ್‌ ಅವರು ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಕೇರಳದ ವಯನಾಡ್‌ಗೆ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ಅನ್ನು ಫ್ಲೈಯಿಂಗ್‌ ಸ್ಕ್ವಾಡ್‌ ಅಧಿಕಾರಿಗಳು ಇಲ್ಲಿ ತಪಾಸಣೆಗೆ ಒಳಪಡಿಸಿದರು ಎಂದು ಪೊಲೀಸರು ತಿಳಿಸಿದರು. 

ಬಿಜೆಪಿ ನಾಯಕರ ಹೆಲಿಕಾಪ್ಟರ್‌ ತಪಾಸಣೆ ನಡೆಸಿ–ಮಮತಾ (ಕೂಚ್‌ಬಿಹಾರ್ ವರದಿ): ಬಿಜೆಪಿ ನಾಯಕರು ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಬಳಸುವ ಹೆಲಿಕಾಪ್ಟರ್‌ಗಳನ್ನು ತಪಾಸಣೆಗೆ ಒಳಪಡಿಸುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಸವಾಲು ಹಾಕಿದ್ದಾರೆ.

ಟಿಎಂಸಿ ಮುಖಂಡ ಅಭಿಷೇಕ್‌ ಬ್ಯಾನರ್ಜಿ ಅವರು ಪ್ರಯಾಣಿಸಿದ ಹೆಲಿಕಾಪ್ಟರ್‌ಅನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದು, ವಿವಾದಕ್ಕೆ ಕಾರಣವಾಗಿತ್ತು.

‘ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಅಭಿಷೇಕ್‌ ಬ್ಯಾನರ್ಜಿ ಅವರ ಹೆಲಿಕಾಪ್ಟರ್‌ಅನ್ನು ‍ತ‍‍ಪಾಸಣೆಗೆ ಒಳಪಡಿಸಿದ್ದಾರೆ. ಹಣ ಮತ್ತು ಚಿನ್ನ ಇರುವುದಾಗಿ ಖಚಿತ ಮಾಹಿತಿ ಲಭಿಸಿದ ಕಾರಣ ತಪಾಸಣೆ ನಡೆಸಿದ್ದಾಗಿ ಅಧಿಕಾರಿಗಳು ಹೇಳಿದ್ದಾರೆ. ಆದರೆ ಅವರಿಗೆ ಏನೂ ಸಿಕ್ಕಿಲ್ಲ. ನಾವು ಅಂತಹ ಕೃತ್ಯದಲ್ಲಿ ತೊಡಗುವುದಿಲ್ಲ’ ಎಂದು ಮಮತಾ ಹೇಳಿದ್ದಾರೆ.

‘ಬಿಜೆಪಿಯವರು ಅಂತಹ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಜೆಪಿ ನಾಯಕರ ಹೆಲಿಕಾಪ್ಟರ್‌ಅನ್ನು ತಪಾಸಣೆ ನಡೆಸುವ ಧೈರ್ಯ ಮಾಡುತ್ತಾರೆಯೇ’ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT