ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗಯಾ: ಮಾಂಝಿ ಎನ್‌ಡಿಎ ಅಭ್ಯರ್ಥಿ

Published 22 ಮಾರ್ಚ್ 2024, 16:27 IST
Last Updated 22 ಮಾರ್ಚ್ 2024, 16:27 IST
ಅಕ್ಷರ ಗಾತ್ರ

ಪಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್‌ ರಾಮ್‌ ಮಾಂಝಿ ಅವರು ಗಯಾ ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಹಿಂದುಸ್ತಾನ್ ಅವಾಮ್‌ ಮೋರ್ಚಾ (ಎಚ್‌ಎಎಂ) ಘೋಷಿಸಿದೆ.

ಮಾಂಝಿ ಅವರ ಸ್ಪರ್ಧೆಗೆ ಎಚ್‌ಎಎಂ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಂಝಿ ಅವರ ಪುತ್ರ ಸಂತೋಷ್‌ ಸುಮನ್‌ ಅವರು ಅನುಮೋದನೆ ನೀಡಿದ್ದಾರೆ ಎಂದು ಪಕ್ಷದ ಹೇಳಿಕೆ ಶುಕ್ರವಾರ ತಿಳಿಸಿದೆ.

ಬಿಹಾರದಲ್ಲಿ ಬಿಜೆಪಿಯು 17 ಕ್ಷೇತ್ರಗಳಲ್ಲಿ ಕಣಕ್ಕೆ ಇಳಿಯುತ್ತಿದ್ದರೆ, ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ಜೆಡಿಯುಗೆ 16 ಕ್ಷೇತ್ರಗಳನ್ನು ನೀಡಿದೆ.

ಚಿರಾಗ್‌ ಪಾಸ್ವಾನ್‌ ಅವರ ಲೋಕ ಜನಶಕ್ತಿ ಪಕ್ಷಕ್ಕೆ (ರಾಮ್‌ ವಿಲಾಸ್‌) ಐದು ಕ್ಷೇತ್ರಗಳನ್ನು ಹಾಗೂ ಎಚ್‌ಎಎಂ ಪಕ್ಷಕ್ಕೆ ಗಯಾ  ಕ್ಷೇತ್ರವನ್ನು ನೀಡಲಾಗಿತ್ತು.

ಗಯಾ ಸೇರಿದಂತೆ ಹಲವು ಕ್ಷೇತ್ರಗಳಿಗೆ ಆರ್‌ಜೆಡಿ ಅಭ್ಯರ್ಥಿಗಳನ್ನು ಪ್ರಕಟಿಸಿದ ಬಳಿಕ ಮಾಂಝಿ ಅವರ ಉಮೇದುವಾರಿಕೆಯನ್ನು ಘೋಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT