ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಯು ತೊರೆದ 4 ಬಾರಿಯ ಸಂಸದ ಮೊಹಮ್ಮದ್ ಅಶ್ರಫ್; ಆರ್‌ಜೆಡಿ ಸೇರ್ಪಡೆ ಸಾಧ್ಯತೆ

Published 19 ಮಾರ್ಚ್ 2024, 13:11 IST
Last Updated 19 ಮಾರ್ಚ್ 2024, 13:11 IST
ಅಕ್ಷರ ಗಾತ್ರ

ಪಟ್ನಾ: ಬಿಹಾರದ ಜೆಡಿಯು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅಲಿ ಅಶ್ರಫ್ ಫತ್ಮಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಆರ್‌ಜೆಡಿಗೆ ಮರಳುವ ಸಾಧ್ಯತೆ ಎಂದು ವರದಿ ತಿಳಿಸಿದೆ.

ನನ್ನ ನೈತಿಕ ಮೌಲ್ಯಗಳನ್ನು ರಕ್ಷಿಸಿಕೊಳ್ಳುವ ಉದ್ದೇಶದಿಂದ ಪಕ್ಷದ ಹುದ್ದೆ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ, ಬಿಹಾರ ಸಿಎಂ ನಿತೀಶ್ ಕುಮಾರ್ ಅವರಿಗೆ ಕೈಬರಹದಲ್ಲಿ ಬರೆದ ಪತ್ರದಲ್ಲಿ ಮೊಹಮ್ಮದ್ ತಿಳಿಸಿದ್ದಾರೆ.

‘ನಾನು ಜೆಡಿಯು ತೊರೆದಿದ್ದೇನೆ. ನನ್ನ ಮುಂದಿನ ರಾಜಕೀಯ ನಡೆ ಬಗ್ಗೆ ಈಗಲೇ ಏನನ್ನೂ ಹೇಳುವುದಿಲ್ಲ. ಮೂರ್ನಾಲ್ಕು ದಿನಗಳಲ್ಲಿ ನಿಮಗೆ ತಿಳಿಯಲಿದೆ’ ಎಂದು ಅವರು ಪಿಟಿಐಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.

ಬಿಹಾರದಲ್ಲಿ ಎನ್‌ಡಿಎ ಸೀಟು ಹಂಚಿಕೆ ಸೂತ್ರವನ್ನು ಘೋಷಿಸಿದ ಒಂದು ದಿನದ ನಂತರ ಈ ಬೆಳವಣಿಗೆ ಆಗಿದೆ. ಫತ್ಮಿ 4 ಬಾರಿ ಗೆದ್ದಿದ್ದ ದರ್ಭಾಂಗ ಕ್ಷೇತ್ರ ಸೇರಿ 17 ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟು ಕೊಡಲಾಗಿದೆ. ಇದರಿಂದ, ಫತ್ಮಿ ತೀವ್ರ ಅಸಮಾಧಾನಗೊಂಡಿದ್ದಾರೆ.

ಯುಪಿಎ–1ರ ಅವಧಿಯಲ್ಲಿ ಕೇಂದ್ರದ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆಯ ರಾಜ್ಯ ಸಚಿವರಾಗಿದ್ದ ಫತ್ಮಿ, 2019ರಲ್ಲಿ ದರ್ಭಾಂಗ ಕ್ಷೇತ್ರದಲ್ಲಿ ಮತ್ತೊಬ್ಬ ಮುಸ್ಲಿಂ ನಾಯಕ ಅಬ್ದುಲ್ ಸಿದ್ಧಿಕಿಯನ್ನು ಕಣಕ್ಕಿಳಿಸಿದ ಬಳಿಕ ಆರ್‌ಜೆಡಿ ವಿರುದ್ಧ ಸಿಡಿದು ಪಕ್ಷ ತೊರೆದಿದ್ದರು.

ಫತ್ಮಿ ಮಗ ಫರಾಜ್ ಸಹ ಜೆಡಿಯು ಶಾಸಕರಾಗಿದ್ದು, ಇಬ್ಬರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಮುಸ್ಲಿಂ ಮತಗಳನ್ನು ಒಟ್ಟುಗೂಡಿಸುವ ಪ್ರಯತ್ನದಲ್ಲಿ ಆರ್‌ಜೆಡಿ ಇದೆ ಎಂದು ವರದಿಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT