ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಂಗನಾ ರ‍್ಯಾಲಿಗೆ ತಡೆ: ಎಫ್‌ಐಆರ್‌ ದಾಖಲು

Published 22 ಮೇ 2024, 15:59 IST
Last Updated 22 ಮೇ 2024, 15:59 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕಂಗನಾ ರನೌತ್‌ ಅವರ ಚುನಾವಣಾ ರ‍್ಯಾಲಿಗೆ ಲಾಹೌಲ್ ಮತ್ತು ಸ್ಪಿತಿಯಲ್ಲಿ ತಡೆಯೊಡ್ಡಿರುವ ಆರೋಪದ ಮೇಲೆ ಅಪರಿಚಿತರ ವಿರುದ್ಧ ಬುಧವಾರ ಎಫ್‌ಐಆರ್‌ ದಾಖಲಾಗಿದೆ.

ಈ ಸಂಬಂಧ ಯುವ ಕಾಂಗ್ರೆಸ್‌ ಪದಾಧಿಕಾರಿಗಳ ವಿರುದ್ಧ ಚುನಾವಣಾಧಿಕಾರಿ ನೋಟಿಸ್‌ ಜಾರಿ ಮಾಡಿದ್ದಾರೆ.

ಕಂಗನಾ ಅವರ ರ‍್ಯಾಲಿಯನ್ನು ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಸ್ಥಳೀಯರು ತಡೆದು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ ಎಂದು ಬಿಜೆಪಿ ಅರೋಪಿಸಿದೆ. 

ಕಾಂಗ್ರೆಸ್‌ ಕಾರ್ಯಕರ್ತರು ರ‍್ಯಾಲಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಈ ಕುರಿತು ತನಿಖೆ ನಡೆಸಬೇಕು ಎಂದೂ ಆಗ್ರಹಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT