ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ: ಹಣಕಾಸು ಸಚಿವೆ ನಿರ್ಮಲಾ

Published 28 ಮಾರ್ಚ್ 2024, 3:00 IST
Last Updated 28 ಮಾರ್ಚ್ 2024, 3:00 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ ಎಂದು ಹೇಳುವ ಮೂಲಕ ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿರುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವಂತೆ ಆಯ್ಕೆ ನೀಡಿದ್ದರು. ಆದರೆ ಅಂತಿಮವಾಗಿ ಸ್ಪರ್ಧಿಸುವುದು ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದೇನೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ತಮಿಳುನಾಡು ಅಥವಾ ಆಂಧ್ರಪ್ರದೇಶದಿಂದ ಸ್ಪರ್ಧಿಸುವುದೇ ಎಂಬ ಸಮಸ್ಯೆಯು ನನ್ನ ಮುಂದಿತ್ತು. ಗೆಲುವಿಗೆ ಇತರೆ ಹಲವು ಮಾನದಂಡಗಳನ್ನು ಅವಲಂಬಿಸಿರುತ್ತದೆ. ನೀವು ಈ ಸಮುದಾಯದವರೇ ಅಥವಾ ಆ ಧರ್ಮದಿಂದ ಬಂದವರೇ? ಹೀಗೆ ಹಲವು ಪ್ರಶ್ನೆಗಳು ಉದ್ಭವಿಸುತ್ತದೆ. ಹಾಗಾಗಿ ನನ್ನಿಂದ ಸಾಧ್ಯವಿಲ್ಲ ಎಂದೆನಿಸಿತು ಎಂದು ಅವರು ತಿಳಿಸಿದ್ದಾರೆ.

ಭಾರತದ ಹಣಕಾಸು ಸಚಿವೆಯಾಗಿದ್ದು, ನಿಮ್ಮ ಬಳಿ ಹಣವಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ನಿರ್ಮಲಾ, ಅದು ಸರ್ಕಾರದ ಹಣ ನನ್ನದಲ್ಲ. ನನ್ನ ಸಂಬಳ, ನನ್ನ ಗಳಿಕೆ, ನನ್ನ ಉಳಿತಾಯ ನನ್ನದ್ದಷ್ಟೇ ಎಂದರು.

ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ನಿರ್ಮಲಾ ತಿಳಿಸಿದ್ದಾರೆ.

ಆಡಳಿತಾರೂಢ ಬಿಜೆಪಿಯು ಹಲವಾರು ರಾಜ್ಯಸಭಾ ಸದಸ್ಯರನ್ನು ಲೋಕಸಭಾ ಚುನಾವಣೆಗೆ ಕಣಕ್ಕಿಳಿಸಿದೆ. ಇವರಲ್ಲಿ ಮುಖ್ಯವಾಗಿ ಪಿಯೂಷ್ ಗೋಯಲ್, ಭೂಪೇಂದರ್ ಯಾದವ್, ರಾಜೀವ್ ಚಂದ್ರಶೇಖರ್, ಮನ್ಸುಖ್ ಮಾಂಡವಿಯಾ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಸೇರಿದ್ದಾರೆ.

ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT