ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಂಧ್ರಪ್ರದೇಶ: ಒಂದು ಲೋಕಸಭೆ, 8 ವಿಧಾನಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಸಿಪಿಐ

Published 5 ಏಪ್ರಿಲ್ 2024, 4:15 IST
Last Updated 5 ಏಪ್ರಿಲ್ 2024, 4:15 IST
ಅಕ್ಷರ ಗಾತ್ರ

ಅಮರಾವತಿ: ಆಂಧ್ರಪ್ರದೇಶದಲ್ಲಿ ಇಂಡಿಯಾ ಕೂಟದಲ್ಲಿರುವ ಸಿಪಿಐ ಪಕ್ಷ 1 ಲೋಕಸಭೆ ಹಾಗೂ 8 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ.

ಆಂಧ್ರಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆ ಶರ್ಮಿಳಾ ರೆಡ್ಡಿ ಮತ್ತು ಸಿಪಿಐ ಕಾರ್ಯದರ್ಶಿ ರಾಮಕೃಷ್ಣ ಅವರು ಹಲವು ಸುತ್ತಿನ ಮಾತುಕತೆ ನಡೆಸಿ ಸೀಟು ಹಂಚಿಕೆಯನ್ನು ಗುರುವಾರ ಅಂತಿಮಗೊಳಿಸಿದ್ದಾರೆ.

ಒಪ್ಪಂದದ ಪ್ರಕಾರ, ಸಿಪಿಐ ಗುಂಟೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ. ಹಾಗೂ ವಿಜಯವಾಡ ಪಶ್ಚಿಮ, ವಿಶಾಖಪಟ್ಟಣ ಪಶ್ಚಿಮ, ಅನಂತಪುರ, ಪತ್ತಿಕೊಂಡ, ತಿರುಪತಿ, ರಾಜಂಪೇಟ್, ಏಲೂರು ಮತ್ತು ಕಮಲಾಪುರ ವಿಧಾಸಭಾ ಕ್ಷೇತ್ರಗಳಲ್ಲಿ ಸಿಪಿಐ ಸ್ಪರ್ಧೆ ಮಾಡಲಿದೆ.

ಈಗಾಗಲೇ ಶರ್ಮಿಳಾ ರೆಡ್ಡಿ ಅವರು ಐದು ಲೋಕಸಭೆ ಮತ್ತು 114 ವಿಧಾನಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಉಳಿದ ಸ್ಥಾನಗಳಿಗೂ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಲಿದ್ದಾರೆ.  

ಆಂಧ್ರಪ್ರದೇಶದ 175 ವಿಧಾನಸಭಾ ಮತ್ತು 25 ಲೋಕಸಭಾ ಸ್ಥಾನಗಳಿಗೆ ಮೇ 13ರಂದು ಚುನಾವಣೆ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT