ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ | ಜೆಡಿಯು ಪಟ್ಟಿಯಲ್ಲಿ ಇಬ್ಬರು ಹಾಲಿ ಸಂಸದರಿಗೆ ಕೊಕ್

Published 24 ಮಾರ್ಚ್ 2024, 7:40 IST
Last Updated 24 ಮಾರ್ಚ್ 2024, 7:40 IST
ಅಕ್ಷರ ಗಾತ್ರ

ಪಟ್ನಾ: ಲೋಕಸಭಾ ಚುನಾವಣೆಗೆ ಬಿಹಾರದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಜೆಡಿಯು ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಪಕ್ಷವು ಸ್ಪರ್ಧಿಸುವ ಎಲ್ಲ 16 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆ ಮಾಡಿದೆ. ಪಟ್ಟಿಯಿಂದ ಇಬ್ಬರು ಹಾಲಿ ಸಂಸದರನ್ನು ಕೈಬಿಡಲಾಗಿದೆ.

ಪಟ್ನಾದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ವಶಿಷ್ಠ ನಾರಾಯಣ ಸಿಂಗ್, ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಟಿಕೆಟ್ ಘೋಷಣೆ ಮಾಡಿದರು.

ಟಿಕೆಟ್ ಸಿಗದವರಲ್ಲಿ ಸಿತಾಮಡಿ ಹಾಗೂ ಸಿವಾನ್ ಪ್ರಮುಖರು. ಹಾಲಿ ಸಂಸದರನ್ನು ಕೈಬಿಡಲಾದ ಕ್ಷೇತ್ರಗಳಲ್ಲಿ ಪಕ್ಷಾಂತರಿಗಳಿಗೆ ಮಣೆ ಹಾಕಲಾಗಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು, ಎನ್‌ಡಿಎ ಮೈತ್ರಿಕೂಟದ ಭಾಗವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT