ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ಕಾಂಗ್ರೆಸ್‌ ಶಾಸಕ ಕಮಲೇಶ್‌ ಶಾ ಬಿಜೆಪಿಗೆ

Published 29 ಮಾರ್ಚ್ 2024, 15:39 IST
Last Updated 29 ಮಾರ್ಚ್ 2024, 15:39 IST
ಅಕ್ಷರ ಗಾತ್ರ

ಭೋಪಾಲ್‌: ಮಧ್ಯಪ್ರದೇಶದ ಛಿಂದವಾಡಾ ಜಿಲ್ಲೆಯ ಅಮರ್‌ವಾಡಾ ಕ್ಷೇತ್ರದಿಂದ ಮೂರು ಬಾರಿ ಕಾಂಗ್ರೆಸ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದ ಕಮಲೇಶ್‌ ಶಾ ಅವರು ಪಕ್ಷ ತೊರೆದು ಬಿಜೆಪಿಗೆ ಶುಕ್ರವಾರ ಸೇರ್ಪಡೆಗೊಂಡರು.

ಛಿಂದವಾಡಾವು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಮುಖಂಡ ಕಮಲ್‌ನಾಥ ಅವರ ತವರು ಜಿಲ್ಲೆಯಾಗಿದೆ.

ಮುಖ್ಯಮಂತ್ರಿ ಮೋಹನ್‌ ಯಾದವ್‌, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಷ್ಣು ದತ್ತ ಶರ್ಮಾ ಅವರು ಕಮಲೇಶ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಕಮಲೇಶ್‌ ಅವರ ಪತ್ನಿ ಹಾಗೂ ಹರಾಯಿ ಪುರಸಭೆ ಅಧ್ಯಕ್ಷೆ ಮಾಧವಿ ಶಾ, ತಂಗಿ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯೆ ಕೇಸರ್‌ ನೇತಮ್‌ ಅವರೂ ಬಿಜೆಪಿಗೆ ಸೇರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT