ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಸಮಸ್ಯೆ; ಚುನಾವಣಾ ಪ್ರಚಾರದಿಂದ ದೂರವುಳಿದ ಬಿಜೆಪಿ ನಾಯಕಿ ಖುಷ್ಬೂ ಸುಂದರ್

Published 7 ಏಪ್ರಿಲ್ 2024, 10:06 IST
Last Updated 7 ಏಪ್ರಿಲ್ 2024, 10:06 IST
ಅಕ್ಷರ ಗಾತ್ರ

ಚೆನ್ನೈ: ಅನಾರೋಗ್ಯದ ಕಾರಣದಿಂದ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಹೈಕಮಾಂಡ್‌ಗೆ ತಿಳಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಖುಷ್ಬೂ ಅವರು, ‘2019ರಲ್ಲಿ ಮೂಳೆ ಮುರಿತ ಅನುಭವಿಸಿದ್ದೆ, ಅದರ ನೋವು ಕಳೆದ ಐದು ವರ್ಷಗಳಿಂದ ನನ್ನನ್ನು ಕಾಡುತ್ತಿದೆ. ಹೀಗಾಗಿ ಹೆಚ್ಚು ಹೊತ್ತು ಕುಳಿತುಕೊಳ್ಳುವಂತಿಲ್ಲ, ಅಲ್ಲದೆ ದೂರದ ಪ್ರಯಾಣ ಮಾಡುವಂತಿಲ್ಲ, ಆದರೆ ಇವರೆಡು ಚುನಾವಣಾ ಪ್ರಚಾರ ಕಾರ್ಯಕ್ಕೆ ಮುಖ್ಯ. ಆದ್ದರಿಂದ ಈ ಬಾರಿಯ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿಲ್ಲ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 

ಖುಷ್ಬೂ ಅವರು ವೈದ್ಯರ ಸಲಹೆಯ ಹೊರತಾಗಿಯೂ ಕೆಲವು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಆರೋಗ್ಯ ಮತ್ತಷ್ಟು ಹದಗೆಡಲು ಕಾರಣವಾಗಿದೆ. ವೈದ್ಯರು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT