ಚೆನ್ನೈ: ಲೋಕಸಭೆ ಚುನಾವಣೆಗೆ ತಮಿಳುನಾಡು ವಿಧಾನಸಭೆಯ ಪ್ರಮುಖ ವಿರೋಧ ಪಕ್ಷವಾದ ಇಂದು (ಶುಕ್ರವಾರ) ಪಕ್ಷದ ಪ್ರಣಾಳಿಕೆಯನ್ನು ಪ್ರಕಟಿಸಿದೆ.

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಹಿಳೆಯರಿಗೆ ಮಾಸಿಕ ₹3,000 ಆರ್ಥಿಕ ನೆರವು ನೀಡುವುದಾಗಿ ಪಕ್ಷ ಘೋಷಿಸಿದೆ.

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿ ರಾಜ್ಯಪಾಲರ ನೇಮಕ, ನೀಟ್‌ಗೆ ಪರ್ಯಾಯ ಪರೀಕ್ಷೆ, ಚೆನ್ನೈನಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪನೆ ಸೇರಿದಂತೆ ಒಟ್ಟು 113 ಭರವಸೆಗಳನ್ನು ಎಐಎಡಿಎಂಕೆ ನೀಡಿದೆ.

ಎಐಎಡಿಎಂಕೆ ಕಳೆದ ವರ್ಷ ಬಿಜೆಪಿ ಜತೆಗೆ ಮೈತ್ರಿ ಮುರಿದುಕೊಂಡಿತ್ತು. ಹಾಗಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಿದೆ.

ತಮಿಳುನಾಡಿನ 16 ಲೋಕಸಭಾ ಕ್ಷೇತ್ರಗಳಿಗೆ ಎಐಎಡಿಎಂಕೆ ಗುರುವಾರ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದಕ್ಕೂ ಮುನ್ನ ಮಾರ್ಚ್ 20ರಂದು ಮೊದಲ ಪಟ್ಟಿಯಲ್ಲಿ 16 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿತ್ತು.

ತಮಿಳುನಾಡಿನ 39 ಲೋಕಸಭಾ ಕ್ಷೇತ್ರಗಳಿಗೆ ಎಪ್ರಿಲ್ 19ರಂದು ಚುನಾವಣೆ ನಡೆಯಲಿದೆ.
.ಜೈಲಿನಿಂದಲೇ ಕೇಜ್ರಿವಾಲ್ ಸರ್ಕಾರ: ಜನರಿಗೆ ಅವಮಾನ ಮಾಡಿದ ಎಎಪಿ; ಠಾಕೂರ್ ಟೀಕೆ.LS Polls: ಬಿಜೆಪಿ 4ನೇ ಪಟ್ಟಿ ಬಿಡುಗಡೆ, ವಿರುಧುನಗರದಿಂದ ನಟಿ ರಾಧಿಕಾ ಕಣಕ್ಕೆ.ಲೋಕಸಭಾ ಚುನಾವಣೆ: 16 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಎಐಎಡಿಎಂಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.