ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Lok Sabha Elections | ಕನ್ಹಯ್ಯ, ಚನ್ನಿಗೆ ಕಾಂಗ್ರೆಸ್ ಟಿಕೆಟ್

Published 14 ಏಪ್ರಿಲ್ 2024, 19:30 IST
Last Updated 14 ಏಪ್ರಿಲ್ 2024, 19:30 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ಪಕ್ಷವು ಭಾನುವಾರ ದೆಹಲಿ, ಪಂಜಾಬ್‌ನ ಲೋಕಸಭಾ ಕ್ಷೇತ್ರಗಳಿಗಾಗಿ 10 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಜಲಂಧರ್‌ ಕ್ಷೇತ್ರದಿಂದ ಕಣಕ್ಕಿಳಿಸಿದೆ.

ಪಕ್ಷದ ಹಿರಿಯ ಮುಖಂಡ ಜೆ.ಪಿ.ಅಗರ್‌ವಾಲ್ ಅವರನ್ನು ಚಾಂದಿನಿ ಚೌಕ್ ಕ್ಷೇತ್ರದಿಂದ ಹಾಗೂ ಯುವ ನಾಯಕ ಕನ್ಹಯ್ಯ ಕುಮಾರ್ ಅವರನ್ನು ಈಶಾನ್ಯ ದೆಹಲಿಯಿಂದ ಕಣಕ್ಕಿಳಿಸಲಾಗಿದೆ. ಅವರು ಬಿಜೆಪಿಯ ಮನೋಜ್‌ ತಿವಾರಿ ವಿರುದ್ಧ ಪೈಪೋಟಿ ನಡೆಸುವರು.

ಇತ್ತೀಚೆಗೆ ಎಎಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಸಂಸದ ಧರ್ಮವೀರ್ ಗಾಂಧಿ ಅವರನ್ನು ಫತೇಗಢ ಸಾಹಿಬ್ (ಎಸ್‌ಸಿ ಮೀಸಲು) ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT