ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ಏ.5ರಂದು ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ

Published 31 ಮಾರ್ಚ್ 2024, 23:30 IST
Last Updated 31 ಮಾರ್ಚ್ 2024, 23:30 IST
ಅಕ್ಷರ ಗಾತ್ರ

ನವದೆಹಲಿ: ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಏಪ್ರಿಲ್‌ 5ರಂದು ಬಿಡುಗಡೆ ಮಾಡುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಅವರು ಭಾನುವಾರ ಪ್ರಕಟಿಸಿದರು.

ಕಾಂಗ್ರೆಸ್‌ ಪಕ್ಷವು ‘ಪಂಚ ನ್ಯಾಯ’, ‘25 ಗ್ಯಾರಂಟಿ’ಗಳನ್ನು ಈಗಾಗಲೇ ಘೋಷಿಸಿದೆ. ‘ಮನೆ ಮನೆ ಗ್ಯಾರಂಟಿ’ ಅಭಿಯಾನವು ಏಪ್ರಿಲ್‌ 3ರಿಂದ ಆರಂಭವಾಗಲಿದೆ ಎಂದು ತಿಳಿಸಿದರು.

ಬಿಜೆಪಿಯು ಕೊನೆಯ ಕ್ಷಣದಲ್ಲಿ ಪ್ರಣಾಳಿಕೆ ಸಮಿತಿಯನ್ನು ರಚಿಸಿದೆ. ಆ ಪಕ್ಷವು ಜನರನ್ನು ತಿರಸ್ಕಾರದಿಂದ ಕಾಣುತ್ತಿರುವುದಕ್ಕೆ ಇದು ಸಾಕ್ಷಿ ಎಂದು ಟೀಕಿಸಿದರು. ಚುನಾವಣಾ ಪ್ರಣಾಳಿಕೆ ತಯಾರಿಸಲು ರಕ್ಷಣಾ ಸಚಿವ ರಾಜನಾಥ ಸಿಂಗ್‌ ನೇತೃತ್ವದ ಸಮಿತಿಯನ್ನು ಬಿಜೆಪಿ ಶನಿವಾರ ರಚಿಸಿತ್ತು.

ದೇಶದಾದ್ಯಂತ ಸಮಾಲೋಚನೆಗಳನ್ನು ನಡೆಸಿ ಕಾಂಗ್ರೆಸ್‌, ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ. ಇ ಮೇಲ್‌ ಹಾಗೂ ‘ಆವಾಜ್‌ ಭಾರತ್‌ ಕಿ’ ವೆಬ್‌ಸೈಟ್‌ ಮೂಲಕ ಇದಕ್ಕೆ ಸಾವಿರಾರು ಸಲಹೆಗಳು ಬಂದಿದ್ದವು. ಪಕ್ಷದ ಪ್ರಣಾಳಿಕೆಯು ಜನರ ಧ್ವನಿಯನ್ನು ಪ್ರತಿನಿಧಿಸಲಿದೆ ಎಂದು ಜೈರಾಮ್‌ ಬಣ್ಣಿಸಿದರು.

‘ಆದಾಯ ತೆರಿಗೆ ನೋಟಿಸ್‌ ನೀಡಿ ನಮ್ಮನ್ನು ಬೆದರಿಸಲು ಬಿಜೆಪಿ ಯತ್ನಿಸುತ್ತಿದೆ. ಇದಕ್ಕೆ ನಾವು ಬಗ್ಗುವುದಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT